Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

RCB ಇಂದು ಕಪ್ ಜಯಿಸಿ ಬರಲಿ...ಗೆದ್ದರೆ ಹರಿದು ಬರಲಿದೆ ಕೋಟಿ ಕೋಟಿ ರೂ...!

ಅಹಮದಾಬಾದ್ : ಮಂಗಳವಾರ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆರ್‌ಸಿಬಿಯು ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ವರ್ಷದ ಟೂರ್ನಿಯುದ್ದಕ್ಕೂ ತುಂಬು ಚೈತನ್ಯದ ಆಟವಾಡುತ್ತ ಫೈನಲ್ ಹಂತಕ್ಕೆ ಏರಿರುವ ಉಭಯ ತಂಡಗಳಲ್ಲಿ ಯಾರೇ ಗೆದ್ದರೂ ಮೊದಲ ಬಾರಿ ಚಾಂಪಿಯನ್ ಆಗುತ್ತಾರೆ. ಪಂಜಾಬ್ ತಂಡಕ್ಕೂ 18 ವರ್ಷಗಳಿಂದ ಪ್ರಶಸ್ತಿ ಕನಸು ನನಸಾಗಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಪ್ರಶಸ್ತಿ ಗೆದ್ದು ದಾಖಲೆ ಹಂಚಿಕೊಂಡಿವೆ. ಕೋಲ್ಕತ್ತ ನೈಟ್ ರೈಡರ್ಸ್ ಮೂರು ಸಲ ಚಾಂಪಿಯನ್ ಆಗಿದೆ. ಫ್ರಾಂಚೈಸಿ ಲೀಗ್‌ನಲ್ಲಿ ಅತ್ಯಂತ ಜನಪ್ರಿಯ ತಂಡಗಳಲ್ಲಿ ಒಂದಾಗಿರುವ ಆರ್‌ಸಿಬಿಯು ಇದುವರೆಗೆ 9 ಸಲ ಪ್ಲೇ ಆಫ್ ಪ್ರವೇಶಿಸಿದೆ. ಅದರಲ್ಲಿ ಮೂರು ಬಾರಿ (2009,2011 ಮತ್ತು 2016) ರನ್ನರ್ಸ್ ಅಪ್ ಆಗಿದೆ.

ಚಾಂಪಿಯನ್‌ ಆಗದಿದ್ದರೂ ತಂಡದ ಮೇಲಿನ ಅಭಿಮಾನಿಗಳ ಪ್ರೀತಿ ಮಾತ್ರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಐಪಿಎಲ್‌ನ ಆರಂಭಿಕ ಆವೃತ್ತಿಯಿಂದ ಇಲ್ಲಿಯವರೆಗೂ ಕೊಹ್ಲಿ ಆರ್‌ಸಿಬಿಯಲ್ಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ ಐಪಿಎಲ್ ತಂಡ ಇದಾಗಿದೆ. ಅಷ್ಟೇ ಅಲ್ಲ; ಪಂದ್ಯ ನಡೆಯುವ ಕ್ರೀಡಾಂಗಣದಲ್ಲಿಯೂ ಆರ್‌ಸಿಬಿ ಅಭಿಮಾನಿಗಳ ಸಂಖ್ಯೆಯೇ ಹೆಚ್ಚು.

ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿದರೆ 20 ಕೋಟಿ ರೂ. ನಗದು ಬಹುಮಾನವನ್ನು ಪಡೆಯಲಿದೆ.

ಐಪಿಎಲ್ ಆಡಳಿತ ಸಮಿತಿ ಈ ವರ್ಷ ಎಷ್ಟು ನಗದು ಬಹುಮಾನವನ್ನು ನೀಡಲಾಗುತ್ತದೆ ಎಂಬುದನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. ಆದರೆ 2022 ರಲ್ಲಿ ಘೋಷಣೆಯಾದ ನಗದು ಬಹುಮಾನವನ್ನೇ 2023, 2024 ರಲ್ಲಿ ನೀಡಲಾಗಿತ್ತು.

ಚಾಂಪಿಯನ್‌ ತಂಡ 20 ಕೋಟಿ ರೂ., ರನ್ನ‌ರ್ ಅಪ್ 13 ಕೋಟಿ ರೂ., ಕ್ವಾಲಿಫೈಯರ್‌ನಲ್ಲಿ 3ನೇ ಸ್ಥಾನ ಪಡೆದ ಮುಂಬೈಗೆ 7 ಕೋಟಿ ರೂ. ಎಲಿಮಿನೇಟರ್‌ನಲ್ಲಿ ಔಟ್‌ಗಿ ನಾಲ್ಕನೇ ಸ್ಥಾನ ಪಡೆದ ಗುಜರಾತ್ ಟೈಟಾನ್ಸ್‌ಗೆ 6.5 ಕೋಟಿ ರೂ. ಸಿಗಲಿದೆ. ತಂಡಗಳಿಗೆ ಮಾತ್ರ ಅಲ್ಲದೇ ವೈಯಕ್ತಿಕ ಪ್ರಶಸ್ತಿಗಳಿಗೂ ನಗದು ಬಹುಮಾನಗಳಿವೆ.

ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಹೊಡೆದ ಬ್ಯಾಟ್ಸ್‌ಮನ್, ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್, ಸೂಪರ್ ಸ್ಟೈಕರ್, ಪವರ್ ಪ್ಲೇಯರ್, ಅತಿ ಹೆಚ್ಚು ಸಿಕ್ಸ‌ರ್ ಬಾರಿಸಿದ ಆಟಗಾರ, ಗೇಮ್ ಚೇಂಜ‌ರ್ ಪ್ರಶಸ್ತಿಗೆ 10 ಲಕ್ಷ ರೂ. ಸಿಗುತ್ತದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?