Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

4 ತಿಂಗಳಲ್ಲಿ ಜೈತನಮಾಳ ಸಮಗ್ರ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ : ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮತ ಸಂಚಾರ; ಅದ್ಧೂರಿಯಾಗಿ ಸ್ವಾಗತಿಸಿದ ನಾಗರಿಕರು

 

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಜಯ ದಾಖಲಿಸಿದರೆ ಚೈತನಮಾಳವನ್ನು ದತ್ತು ಸ್ವೀಕರಿಸಿ, ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೈತನ್ ಮಾಳದಲ್ಲಿ ಚುನಾವಣಾ ಪ್ರಚಾರ ನಡೆಸಿದ ಸಚಿವರು, ಇಲ್ಲಿರುವ ಅವ್ಯವಸ್ಥೆ ನೋಡಿ ನಿಜಕ್ಕೂ ಬೇಸರ ಉಂಟಾಯಿತು. ಕನಿಷ್ಠ ಮೂಲಭೂತ ಸೌಕರ್ಯಗಳನ್ನೂ ಒದಗಿಸಲು ಈ ಭಾಗದ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಜೈತನ್ ಮಾಳ ಜನರು ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳ ಕೊರತೆ ನೋಡಿ ಮರುಕ ಉಂಟಾಯಿತು. ಮೃಣಾಲ್‌ ಹೆಬ್ಬಾಳ್ಕರ್ ಆರಿಸಿ ಬಂದರೆ ಕೇವಲ ನಾಲ್ಕು ತಿಂಗಳಲ್ಲಿ ಅಭಿವೃದ್ಧಿ ಮಾಡಲಾಗುವುದು. ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಅವರನ್ನು ಬೆಂಬಲಿಸಬೇಕು ಎಂದು ಸಚಿವರು ಮನವಿ ಮಾಡಿದರು.

* *ಜುನೆ ಬೆಳಗಾವಿಯಲ್ಲಿ ಅದ್ದೂರಿ ಸ್ವಾಗತ*
ಬಳಿಕ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಜುನೆ (ಹಳೇ) ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಚಾರ ನಡೆಸಿದರು. ಸ್ಥಳೀಯ ಮಹಿಳೆಯರು ಆರತಿ ಬೆಳಗಿ ಸಚಿವರನ್ನು ಸ್ವಾಗತಿಸಿದರು. ಹಳೇ ಬೆಳಗಾವಿ ನಾಕಾದಿಂದ ಕಲ್ಲಪ್ಪ ದೇವಸ್ಥಾನದವರೆಗೆ ಸಚಿವರೊಂದಿಗೆ ನೂರಾರು ಮಹಿಳೆಯರು ಹೆಜ್ಜೆ ಹಾಕಿದರು. ಚೌಡಿಗಲ್ಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಜೊತೆಗೂಡಿ ಸಚಿವರು ಪ್ರಚಾರ ನಡೆಸಿದರು.

ಈ ವೇಳೆ ದೇವದಾಸ್ ಕನ್ನುಕರ್, ಕಾರ್ಪೋರೇಟರ್ ಲಕ್ಷ್ಮೀ ಲೋಖರೆ, ಮಲ್ಲಸರ್ಜ ಪಾಟೀಲ್,ತುಕರಾಮ್ ಹೊಸುರಕರ, ನೈ.ವೈ.ಕನ್ನುಕರ್, ಡಾ.ಸುಕೀರ್ತ್ ನಾರಾಯಣ್ ಭಂಡಾರಿ, ಮಾಧುರಿ ಜಾಧವ್, ಮುತ್ತುರಾಜ್, ನಾಗಪ್ಪ, ಯಲ್ಲಪ್ಪ ಗುಜನಾಳ, ಚಂದ್ರು, ಶಬ್ಬೀರ್, ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?