Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ನ್ನು 251 ರನ್ ಗಳಿಗೆ ಕಟ್ಟಿ ಹಾಕಿದ ಭಾರತ

ದುಬೈ: ಅತ್ಯಂತ ನಿಖರ ಬೌಲಿಂಗ್ ದಾಳಿ ನಡೆಸಿದ ಭಾರತೀಯ ತಂಡದವರು ಈ ಬಾರಿ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಲೇಬೇಕು ಎಂದು ಪಣತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಸಂಘಟಿತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಭಾರತದ ಸ್ಪಿನ್ನರ್‌ಗಳ ಶಿಸ್ತುಬದ್ಧ ದಾಳಿಯಿಂದಾಗಿ ನ್ಯೂಜಿಲೆಂಡ್ ತಂಡವು ಇಲ್ಲಿನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ 50 ಓವರ್‌ಗಳಲ್ಲಿ 251 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆಗೆ ವಿಲ್ ಯಂಗ್ ಮತ್ತು ರಚಿನ್ ರವೀಂದ್ರ ಉತ್ತಮ ಆರಂಭನೀಡಿದರು. ಮತ್ತೆ ಸಿಡಿಯುವ ಸೂಚನೆ ನೀಡಿದ ರಚಿನ್, ಭಾರತೀಯ ಸ್ಪಿನ್ನರ್‌ಗಳ ವಿರುದ್ಧ ಬೀಸಾಟ ಆಡಿದರು. 29 ಎಸೆತಗಳಲ್ಲಿ 37 ರನ್ ಗಳಿಸಿದ್ದಾಗ ಕುಲದೀಪ್ ಯಾದವ್ ಎಸೆತದಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ಭಾರತೀಯ ಆಟಗಾರರ ಸಂಭ್ರಮಾಚರಣೆ ರಚಿನ್ ಅವರ ವಿಕೆಟ್‌ನ ಮಹತ್ವದ ಪ್ರತೀಕದಂತಿತ್ತು.

ನಂತರ ಬಂದ ಕೇನ್ ವಿಲಿಯಮ್ಪನ್ ಅವರನ್ನೂ ಕುಲದೀಪ್ ಬಲಿ ಪಡೆದರು. ಆವರೆಗೂ 7ರ ಸರಾಸರಿಯಲ್ಲಿ ದಾಖಲಾಗುತ್ತಿದ್ದ ಕೀವಿಸ್ ರನ್ ಗಳಿಕೆಗೆ ಬ್ರೇಕ್ ಬಿತ್ತು. ನಿಯಮಿತವಾಗಿ ಭಾರತದ ಸ್ಪಿನ್ನರ್‌ಗಳು ವಿಕೆಟ್ ಕಿತ್ತರು.

ನ್ಯೂಜಿಲೆಂಡ್ ಪರ ಅತಿ ಹೆಚ್ಚು ರನ್ ಕಾಣಿಕೆ ನೀಡಿದ್ದು ಡೇರಿಲ್ ಮಿಚೆಲ್. ಅವರು 101 ಎಸೆತಗಳಲ್ಲಿ 63 ರನ್ ಗಳಿಸಿದರು. ಗ್ಲೆನ್ ಫಿಲಿಪ್ ನಿಧಾನಗತಿಯ 34 ರನ್ ಬಾರಿಸಿದರು. ಮಿಚೆಲ್ ಬ್ರೇಸ್‌ವೆಲ್ ಅರ್ಧ ಶತಕ ಗಳಿಸಿದರು.

ಭಾರತದ ಪರ ವರುಣ್ ಚಕ್ರವರ್ತಿ ಹಾಗೂ ಕುಲದೀಪಗ ಯಾದವ್ ತಲಾ 2, ಶಮಿ ಹಾಗೂ ಜಡೇಜಾ 2 ವಿಕೆಟ್ ಕಿತ್ತರು. ವೇಗಿಗಳಾದ ಶಮಿ, ಪಾಂಡ್ಯ ದುಬಾರಿಯಾದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ