Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಲ್ಲ ಮಾದರಿಯ ಕ್ರಿಕೆಟ್‌ಗೆ ಭಾರತದ ಖ್ಯಾತನಾಮ ಆಟಗಾರ ವಿದಾಯ

ನವದೆಹಲಿ: ಟೆಸ್ಟ್ ಪರಿಣತ ಬ್ಯಾಟರ್ ಚೇತೇಶ್ವರ ಪೂಜಾರ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು (ಭಾನುವಾರ) ನಿವೃತ್ತಿ ಘೋಷಿಸಿದ್ದಾರೆ.

ಭಾರತೀಯ ಕ್ರಿಕೆಟಿಗ, ಟೆಸ್ಟ್‌ ಕ್ರಿಕೆಟ್‌ ಸ್ಪೆಷಲಿಸ್ಟ್‌, ತನ್ನ ಮೃದು ಮಾತಿನಿಂದಲೇ ಗುರುತಿಸಲ್ಪಡುತ್ತಿದ್ದ ಚೇತೇಶ್ವರ ಪೂಜಾರ ಅವರು
ಟೆಸ್ಟ್ ಕ್ರಿಕೆಟ್‌ನಲ್ಲಿನ ತಮ್ಮ ಸಾಧನೆಗೆ ಹೆಸರುವಾಸಿ. ಭಾರತದ ಅನುಭವಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಅವರು ಎಲ್ಲಾ ಮಾದರಿ ಆಟದಿಂದ ನಿವೃತ್ತಿಯಾಗುವ ಬಗ್ಗೆ ಅವರು ಭಾನುವಾರ (ಆಗಸ್ಟ್ 24) ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿದರು.

ಪೂಜಾರ ಟೆಸ್ಟ್ ಮತ್ತು ಏಕದಿನ ಪಂದ್ಯಗಳೆರಡರಲ್ಲೂ ಭಾರತ ಪರ ಆಡಿದ್ದಾರೆ. ಟೆಸ್ಟ್‌ ನಲ್ಲಿ ಅವರು ಆ 103 ಬಾರಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಐದು ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆದರೆ ಅವರು ಟೆಸ್ಟ್ ಪಂದ್ಯಗಳಿಂದಲೇ ಹೆಸರು ಪಡೆದವರು.

ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 7195 ರನ್‌ಗಳು ಮತ್ತು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 21301 ರನ್‌ಗಳನ್ನು ಗಳಿಸಿರುವುದು ಅವರ ಸಾಧನೆಗೆ ಸಾಕ್ಷಿಯಾಗಿದೆ.

ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ನಾನು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ನನ್ನ ಕೈಲಾದಷ್ಟು ಪ್ರಯತ್ನಿಸುವುದು - ಅದರ ನಿಜವಾದ ಅರ್ಥವನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಅಸಾಧ್ಯ. ಆದರೆ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು. ಅಪಾರ ಕೃತಜ್ಞತೆಯಿಂದ ನಾನು ಎಲ್ಲಾ ರೀತಿಯ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು!'' ಎಂದು ಅವರು ತಮ್ಮ ಪೋಸ್ಟ್‌ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

2019-20 ಮತ್ತು 2020-21ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ದಾಖಲಿಸಿದ ಸತತ ಸರಣಿ ಗೆಲುವುಗಳಲ್ಲಿ ಪೂಜಾರ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಭಾರತ ಪರ ಪೂಜಾರ ಅವರ ಕೊನೆಯ ಟೆಸ್ಟ್ ಪಂದ್ಯ ಆಡಿದ್ದು 2023 ರಲ್ಲಿ ನಡೆಯಿತು. ಅವರು ಡಬ್ಲ್ಯೂಟಿಸಿ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ತಂಡದ ಭಾಗವಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ