Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹತ್ವದ ಕಾರ್ಯಾಚರಣೆಯಲ್ಲಿ ಅಂತಾರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ ಪೊಲೀಸರು..!

ಬೆಳಗಾವಿ: ಮಹತ್ವದ ಕಾರ್ಯಾಚರಣೆಯಲ್ಲಿ ಕರ್ನಾಟಕ ಪೊಲೀಸರು 10 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡು ಖತರ್ನಾಕ್ ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಡಹಿಂಗ್ಲಜ್ ತಾಲೂಕಿನ ಕರಂಬಳಿ ಗ್ರಾಮದ ವಿಶಾಲ್ ಸಂಜಯ್ ಮೋರೆ ಬಂಧಿತ. ಕೊನೆಗೂ ನಿಪ್ಪಾಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ನಿಪ್ಪಾಣಿ ಹಾಲಸಿದ್ದನಾಥ ಮಂದಿರ ಬಳಿ ನಿಪ್ಪಾಣಿ ಬಸವೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ರಮೇಶ ಪವಾರ್ ಕಾರ್ಯನಿರತರಾಗಿದ್ದಾಗ ಕಳ್ಳ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಮೂರು ತಿಂಗಳಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಿಂದ ದ್ವಿಚಕ್ರ ವಾಹನ ಕಳ್ಳತನ ಮಾಡಿ ಪಡಲಿಹಾಳ ಗ್ರಾಮದ ಜನ ವಸತಿ ಇಲ್ಲದ ಪ್ರದೇಶದಲ್ಲಿ ಮೂರು ದ್ವಿಚಕ್ರ ವಾಹನ ಹಾಗೂ ಸ್ಥಳೀಯ ದನಗಳಪೇಟೆ ಬಳಿಯ ಜನ ವಸತಿ ಇಲ್ಲದ ಪ್ರದೇಶದ ಗಿಡಗಂಟಿಗಳಲ್ಲಿ ಆರು ದ್ವಿಚಕ್ರ ವಾಹನ ಮಾರಾಟ ಮಾಡಲು ಮುಚ್ಚಿಟ್ಟಿದ್ದ ಸಂಗತಿ ಈಗ ಬೆಳಕಿಗೆ ಬಂದಿದೆ. ಈತನಿಂದ ಒಟ್ಟು ರೂ.4.14 ಲಕ್ಷ ಮೌಲ್ಯದ 10 ಬೈಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿಪಿಐ ಬಿ.ಎಸ್. ತಳವಾರ ನೇತೃತ್ವದಲ್ಲಿ ಈ ಕಾರ್ಯಾಚರಣೆಯನ್ನು ಪೊಲೀಸರು ನಡೆಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ