Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೆಲಿಕಾಪ್ಟ‌ರ್ ಅಪಘಾತ-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಸಚಿವ ಅಮೀರ್ ಸಾವು


  1. ಟೆಹ್ರಾನ್: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (63), ವಿದೇಶಾಂಗ ವ್ಯವಹಾರಗಳ ಸಚಿವ ಅಮೀ‌ರ್ ಅಬ್ಬೊಲ್ಲಾಹಿಯಾನ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.


ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಭಾನುವಾರ ಅಜೆ‌ರ್ ಬೈಜಾನ್ ಪ್ರಾಂತ್ಯದ ಗಡಿಯ ಗುಡ್ಡಪ್ರದೇಶಗಳ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿತ್ತು.

ಅಪಘಾತಕ್ಕೂ ಮುನ್ನ ಹೆಲಿಕಾಪ್ಟರ್ ನಿಯಂತ್ರಣ ಘಟಕದ ಸಂಪರ್ಕ ಕಡಿದುಕೊಂಡಿದೆ.
ಹೆಲಿಕಾಪ್ಟ‌ರ್ ನಾಪತ್ತೆಯಾಗಿರುವ ಗುಡ್ಡ ಪ್ರದೇಶಗಳಲ್ಲಿ ದಟ್ಟನೆಯ ಮಂಜು ಮಸುಕಿದ್ದು, ಶೋಧ ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದವು.

ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಜೋಲ್ಫಾ ವಲಯದಲ್ಲಿ ಅಪಘಾತಕ್ಕೀಡಾಗಿದೆ ಎಂದು ಇರಾನ್‌ ರಾಷ್ಟ್ರೀಯ ಟಿ.ವಿ.ವಾಹಿನಿ ವರದಿ ಮಾಡಿದೆ. ಇದು, ಅಪಘಾತ ಎಂದು ಕೆಲ ಅಧಿಕಾರಿಗಳು ಹೇಳಿದ್ದಾರೆ.

ಅಜೆರ್‌ಬೈಜಾನ್‌ನಲ್ಲಿ ಅರಾಸ್ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಅಣೆಕಟ್ಟು ಉದ್ಘಾಟನೆಗಾಗಿ ರೈಸಿ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಜೆರ್‌ಬೈಜಾನ್ ಅಧ್ಯಕ್ಷ ಇಲ್ಲಮ್ ಅಲಿಯೆವ್ ಅವರು ಇದ್ದರು.

ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ ಜೊತೆಗೆ ಬೆಂಗಾವಲಿನ ಎರಡು ಹೆಲಿಕಾಪ್ಟರ್‌ಗಳು ಹಾರಾಟ ಆರಂಭಿಸಿದ್ದವು. ಅವು ಸುರಕ್ಷಿತವಾಗಿ ನಿಗದಿತ ತಾಣ ತಲುಪಿವೆ ಎಂದು ತಾನಿಂ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ