Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್‌. ಶಾಂತಕುಮಾರ್‌ ಸ್ಪರ್ಧೆ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕಾಗಿ ದಿ ಪ್ರಿಂಟರ್ಸ್ ಮೈಸೂರು ಪ್ರೈವೇಟ್ ಲಿಮಿಟೆಡ್ (ಪ್ರಜಾವಾಣಿ' ಮತ್ತು 'ಡೆಕ್ಕನ್ ಹೆರಾಲ್ಡ್ ಪತ್ರಿಕಾ ಸಮೂಹ) ನಿರ್ದೇಶಕ ಕೆ.ಎನ್. ಶಾಂತಕುಮಾ‌ರ್ ಅವರು ಸ್ಪರ್ಧಿಸಲಿದ್ದಾರೆ.

ಕೆಎಸ್‌ಸಿಎ ನಿಕಟಪೂರ್ವ ಅಧ್ಯಕ್ಷ ಎ.ರಘುರಾಮ್ ಭಟ್‌ ಅವರ ಅಧಿಕಾರಾವಧಿಯು ಸೆಪ್ಟೆಂಬರ್ 30ರಂದು ಮುಕ್ತಾಯವಾಗಿತ್ತು. ಅವರು ಇತ್ತೀಚೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಜಾಂಚಿಯಾಗಿ ನೇಮಕವಾಗಿದ್ದಾರೆ. ಭಾರತ ತಂಡದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಬಣದಿಂದ ಶಾಂತಕುಮಾ‌ರ್ ಅವರು ಕಣಕ್ಕಿಳಿಯಲಿದ್ದಾರೆ.

ಶಾಂತಕುಮಾ‌ರ್ ಅವರು ಎಂಟು ಒಲಿಂಪಿಕ್ ಕೂಟಗಳಲ್ಲಿ ಪತ್ರಿಕಾ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ವಿವಿಧ ಕ್ರೀಡಾ ಸಂಸ್ಥೆಗಳ ಆಡಳಿತದಲ್ಲಿ ಸಕ್ರಿಯರಾಗಿದ್ದಾರೆ.

ಪಟೇಲ್ ಬಣದ ಎದುರಾಳಿ ತಂಡದಿಂದ ಭಾರತ ತಂಡದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿದೆ. ಸಮಿತಿಯ ಇನ್ನುಳಿದ ಸ್ಥಾನಗಳಿಗೆ ಉಭಯ ಬಣಗಳಿಂದ ಅಭ್ಯರ್ಥಿಗಳನ್ನು ಇನ್ನೂ ಪ್ರಕಟಿಸಿಲ್ಲ.

12ರಿಂದ ನಾಮಪತ್ರ ಸಲ್ಲಿಕೆ: ಕೆಎಸ್‌ಸಿಎ ಚುನಾವಣೆಗೆ

ಇದೇ 12ರಿಂದ 15ರವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. 17ರಂದು ಕಣದಲ್ಲಿರುವವರ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ನವೆಂಬರ್ 30ರಂದು ಚುನಾವಣೆ ನಡೆಯಲಿದೆ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ