Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

'ಶುಭವಾಗಲಿ' ಬರೆಯಲು ಬಾರದ ಕನ್ನಡ ಸಂಸ್ಕೃತಿ ಸಚಿವ ತಂಗಡಗಿ ; ವಿಡಿಯೋ ಟ್ರೋಲ್ ಬೆನ್ನಲ್ಲೇ ಬಿಜೆಪಿ ವ್ಯಂಗ್ಯ ಕಾಂಗ್ರೆಸ್‌ ಸರ್ಕಾರ ಅನಕ್ಷರಸ್ಥರ ದೊಡ್ಡಿ ಎಂದು ಟೀಕೆ

 

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದನ್ನು ಬಿಜೆಪಿ ವ್ಯಂಗ್ಯವಾಡಿದೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್ ಮೇಧಾವಿಗಳಾದ ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ಬಿಜೆಪಿ ಟೀಕಿಸಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದರು. 'ಶಬ' ಎಂದು ಬರೆದ ಬಳಿಕ ಬೆಂಬಲಿಗರು ಶುಭ ಮಾಡಲು ಸೂಚಿಸಿದ್ದರಿಂದ ಆನಂತರ ಸರಿಯಾಗಿ ಬರೆದಿದ್ದರು. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಶಿಕ್ಷಣ ಸಚಿವರ ರೀತಿಯಲ್ಲೇ ಕನ್ನಡ ಸಂಸ್ಕೃತಿ ಸಚಿವರಿಗೂ ಕನ್ನಡ ಓದಲು, ಬರೆಯಲು ಬರಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ವ್ಯಂಗ್ಯವಾಡಿದೆ. ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೋಲೆ ಎಂದಿರುವ ಬಿಜೆಪಿ, ಕನ್ನಡ ಓದಲು ಬರೆಯಲು ಬಾರದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಒಂದು ಕಡೆಯಾದರೆ, ಕನ್ನಡದ ಸುಲಭವಾದ ಪದವನ್ನು ಬರೆಯಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿಲ ವಿಲ ಒದ್ದಾಡಿದ್ದಾರೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್‌ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ ಎಂದು ವ್ಯಂಗ್ಯವಾಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ