Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿ

ಬೆಳಗಾವಿ: ಮರಾಠಿ ಶಿಕ್ಷಕರ ಮಗ ಸರಜೂ ಕಾಟ್ಕರ್ ಹುಬ್ಬಳ್ಳಿಯಿಂದ ಬೆಳಗಾವಿಗೆ ಬಂದು  ಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಹಿರಿಯ ವಿದ್ವಾಂಸ ಬಸವರಾಜ ಜಗಜಂಪಿ ಹೇಳಿದರು.

ನೃಪತುಂಗ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಬೆಳಗಾವಿ ಬಹಳಷ್ಟು ಸಾಹಿತಿಗಳನ್ನು ಬೆಳೆಸಿದೆ. ಇಂತಹ ಬೆಳಗಾವಿಗೆ ಬಂದ ಅವರು ಸಾಹಿತ್ಯ ಲೋಕದ ಸವ್ಯಸಾಚಿ ಎನಿಸಿದ್ದಾರೆ. ಹಲವಾರು ಹಿರಿ ಕಿರಿಯ ಸಾಹಿತಿಗಳನ್ನು ಬೆಳೆಸಿದ್ದಾರೆ ಎಂದರು. 


ಹಿರಿಯ ಕವಿ ಎಂ.ಎಸ್. ಇಂಚಲ ಕಾರ್ಯಕ್ರಮ ಉದ್ಘಾಟಿಸಿದರು. ಸರಜೂ ಕಾಟ್ಕರ್ ಅವರು ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಬೆಳೆಸಿದ್ದಾರೆ. ಅವರಿಗೆ ಇನ್ನಷ್ಟು ಪ್ರಶಸ್ತಿಗಳು ಬರಲಿ ಎಂದು ಇಂಚಲ ಹೇಳಿದರು.

ಹಿರಿಯ ಸಾಹಿತಿ ಬಿ.ಎಸ್.ಗವಿಮಠ ಮಾತನಾಡಿ, 80 ಕೃತಿಗಳನ್ನು ಬರೆದಿರುವ ಸರಜೂ ಕಾಟ್ಕರ್ 35ಕ್ಕೂ ಹೆಚ್ಚು ಆಯ್ಕೆ ಸಮಿತಿಗಳಲ್ಲಿ ಕೆಲಸ ಮಾಡಿದ ಅಪರೂಪದ ಸಾಹಿತಿ, ಅವರಿಂದ ಸಾಹಿತ್ಯ ಲೋಕ ಇನ್ನಷ್ಟು ಬೆಳಗಲಿ ಎಂದರು.

ಹಿರಿಯ ಸಾಹಿತಿ ಎಲ್.ಎಸ್.ಶಾಸ್ತ್ರಿ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡೂ ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ವಿಶಿಷ್ಟ ಸಾಹಿತಿ ಸರಜೂ ಕಾಟ್ಕರ್. ಪ್ರಶಸ್ತಿಗಳನ್ನೆ ಅನುಮಾನಿಸುವ ಸಂದರ್ಭದಲ್ಲಿ ಸರಜೂ ಕಾಟ್ಕರ್ ಅಂಥವರಿಗೆ ಪ್ರಶಸ್ತಿ ಬಂದರೆ ಪ್ರಶಸ್ತಿಯ ಮೌಲ್ಯ ಹೆಚ್ಚುತ್ತದೆ ಎಂದರು.


ಸನ್ಮಾನಕ್ಕೆ ಪ್ರತಿಕ್ರಿಯಿಸಿ ಡಾ.ಸರಜೂ ಕಾಟ್ಕರ್ ಮಾತನಾಡಿದರು, ಕನ್ನಡ ಸಾಹಿತ್ಯದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ನೃಪತುಂಗ ಪ್ರಶಸ್ತಿ ಬಂದಿರುವುದನ್ನು ಕೇಳಿ ಮೊದಲು ನಂಬಲಾಗಲಿಲ್ಲ ಎಂದರು.

ಬೆಳಗಾವಿ ನನಗೆ ಎಲ್ಲವನ್ನೂ ನೀಡಿ ಬೆಳೆಸಿದೆ. ಜ್ಞಾನ ಪೀಠ ಪ್ರಶಸ್ತಿಯಷ್ಟೇ ಮಹತ್ವದ ನೃಪತುಂಗ ಪ್ರಶಸ್ತಿ ಸಿಕ್ಕಿದ್ದು ಅತ್ಯಂತ ಸಂತಸ ನೀಡಿದೆ ಎಂದರು.


ಹಿರಿಯ ನ್ಯಾಯವಾದಿ ಎಸ್.ಎಂ.ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಸರಜೂ ಕಾಟ್ಕರ್ ಬೆಳಗಾವಿಯ ಹೆಮ್ಮೆ. ಇಂತಹ ಸಾಹಿತಿಗಳನ್ನು ಸನ್ಮಾನಿಸಿದ್ದು ಖುಷಿ ತಂದಿದೆ ಎಂದು ಅವರು ಹೇಳಿದರು.

ಖುಷಿ ಡವಳಿ ಪ್ರಾರ್ಥನೆ ಹಾಡಿದರು. ಚಂದ್ರಕಾಂತ ಕುಸನೂರ ಪ್ರತಿಷ್ಠಾನದ ಅಧ್ಯಕ್ಷ ರವಿ ಕೊಟಾರಗಸ್ತಿ ಸ್ವಾಗತಿಸಿದರು. ರಂಗತಜ್ಞ ರಾಮಕೃಷ್ಣ ಮರಾಠೆ ಪ್ರಾಸ್ತಾವಿಕ ಮಾತನಾಡಿದರು. ಡಾ.ಸರಜೂ ಕಾಟ್ಕರ್ ಮತ್ತು ಸುಮಾ ಕಾಟ್ಕರ್ ಅವರನ್ನು ಅಭಿಮಾನಿಗಳ ಪರವಾಗಿ ಸನ್ಮಾನಿಸಲಾಯಿತು. ಆರ್.ಬಿ.ಕಟ್ಟಿ ಹಾಗೂ ಎಂ.ಕೆ.ಜೈನಾಪುರ ವೇದಿಕೆಯಲ್ಲಿದ್ದರು.  ಶಿರೀಶ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಪಿ.ಜಿ.ಕೆಂಪಣ್ಣವರ್ ವಂದಿಸಿದರು .

ಚಂದ್ರಕಾಂತ ಕುಸನೂರ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಭವನ ವಿಶ್ವಸ್ಥ ಮಂಡಳಿ ಹಾಗೂ ಎಂ.ಕೆ.ಪಬ್ಲಿಸಿಟಿ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ