Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂತಾರ: ಚಾಪ್ಟರ್​ 1 ರಿಲೀಸ್ ದಿನಾಂಕ ಅನೌನ್ಸ್ ಮಾಡಿದ ರಿಷಬ್

ಬೆಂಗಳೂರು : ರಿಷಬ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ’ ಸಿನಿಮಾ ದೇಶಾದ್ಯಂತ ಸೂಪರ್ ಹಿಟ್ ಆಗಿತ್ತು. ಆ ಯಶಸ್ಸಿನಿಂದ ಪ್ರೀಕ್ವೆಲ್​ ಘೋಷಿಸಲಾಗಿತ್ತು. ಅದಕ್ಕೆ ‘ಕಾಂತಾರ: ಚಾಪ್ಟರ್​ 1’ ಎಂದು ಶೀರ್ಷಿಕೆ ಇಡಲಾಗಿದ್ದು, ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾ ಮೂಲಕ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಿದ್ದು, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 2025ರ ಅಕ್ಟೋಬರ್​ 2ರಂದು ‘ಕಾಂತಾರ: ಚಾಪ್ಟರ್​ 1’ ರಿಲೀಸ್ ಆಗಲಿದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್ ಕಿರಗಂದೂರು ಅವರು ದೊಡ್ಡ ಮಟ್ಟದಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಘಟಾನುಘಟಿ ತಂತ್ರಜ್ಞರು ಈ ಸಿನಿಮಾದ ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ ಅವರು ಮುಖ್ಯ ಭೂಮಿಕೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಕುಂದಾಪುರದಲ್ಲಿ ಚಿತ್ರೀಕರಣ ಮಾಡಲಾಗುತ್ತಿದ್ದು, ಅದರ ಕೆಲಸಗಳಲ್ಲಿ ರಿಷಬ್ ಶೆಟ್ಟಿ ತುಂಬ ಬ್ಯುಸಿ ಆಗಿದ್ದಾರೆ.

ಬೃಹತ್ ಬಜೆಟ್​ನಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿದ್ಧವಾಗುತ್ತಿದೆ. ಹಲವು ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಜೊತೆಗೆ ಪ್ರೀ-ಪ್ರೊಡಕ್ಷನ್ ಕೆಲಸಗಳಿಗೂ ಹೆಚ್ಚು ಸಮಯ ಹಿಡಿಯಲಿದೆ. ಈ ಎಲ್ಲ ಕಾರಣಗಳಿಂದ ಸಿನಿಮಾ ಬಿಡುಗಡೆಗೆ ಸಾಕಷ್ಟು ತಿಂಗಳು ಬೇಕಾಗುತ್ತದೆ. ಮುಂದಿನ ವರ್ಷ ಅಕ್ಟೋಬರ್​ 2ರಂದು ‘ಕಾಂತಾರ: ಚಾಪ್ಟರ್​ 1’ ಬಿಡುಗಡೆ ಮಾಡಲು ರಿಷಬ್​ ಶೆಟ್ಟಿ ಹಾಗೂ ಚಿತ್ರತಂಡ ನಿರ್ಧರಿಸಿದೆ.

‘ಕಾಂತಾರ’ ಸಿನಿಮಾವನ್ನು ಮೊದಲ ಕರ್ನಾಟಕದಲ್ಲಿ ಬಿಡುಗಡೆ ಮಾಡಲಾಗಿತ್ತು. ಬಳಿಕ ಬೇರೆ ರಾಜ್ಯಗಳಿಂದಲೂ ಬೇಡಿಕೆ ಬಂದಿದ್ದರಿಂದ ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಿ ತೆರೆಕಾಣಿಸಲಾಗಿತ್ತು. ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ವಿಶ್ವಾದ್ಯಂತ ರಿಲೀಸ್ ಮಾಡಲಾಗುವುದು ಎಂದು ರಿಷಬ್ ಶೆಟ್ಟಿ ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಕಾಂತಾರ ಒಂದು ದಂತಕಥೆ ಚಿತ್ರದ ಅಧ್ಯಾಯ -1 ಇದಾಗಿದೆ.

7 ಭಾಷೆಗಳ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಹೊಂಬಾಳೆ ಫಿಲ್ಡ್ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

ಕದಂಬರ ಕಾಲದ ಕಥೆಯನ್ನು ಹೊತ್ತ ಚಿತ್ರ ಇದಾಗಿರಲಿದೆ ಎಂದು ಈ ಹಿಂದೆಯೇ ಹೇಳಲಾಗಿತ್ತು. ಅದಕ್ಕೆ ತಕ್ಕಂತೆ ರಿಷಬ್ ಶೆಟ್ಟಿ ಕಳರಿಪಯಟ್ಟು ತರಬೇತಿ ಪಡೆದ ಬಗ್ಗೆ ಫೋಟೊವನ್ನು ಹಂಚಿಕೊಂಡಿದ್ದರು.

ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ... ಒಟ್ಟು 7 ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.

ಕಾಂತಾರ ಸಿನಿಮಾದ ಪ್ರೀಕ್ವೆಲ್ ಇದಾಗಿದ್ದು, ಅಭಿಮಾನಿಗಳು ಚಿತ್ರ ವೀಕ್ಷಿಸಲು ಕಾತುರರಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ