Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ ; ಜ.23ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿಇಟಿ 2025ರ ವೇಳಾಪಟ್ಟಿ ಪ್ರಕಟಿಸಿದೆ. ಸಿಇಟಿ ಪರೀಕ್ಷೆಯು ಏಪ್ರಿಲ್‌ 16 (ಬುಧವಾರ) ಹಾಗೂ 17 (ಗುರುವಾರ)ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದೆ.

ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಇಂಜಿನಿಯರಿಂಗ್, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ ಗುರುವಾರ ಸಿಇಟಿ-2025ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. 2025ನೇ ಸಾಲಿನ ಸಿಇಟಿ ಪರೀಕ್ಷೆ ಏಪ್ರಿಲ್ 16, 17ರಂದು ನಡೆಯಲಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಏಪ್ರಿಲ್‌ 16ರಂದು ಬೆಳಿಗ್ಗೆ 10:30ರಿಂದ ಭೌತವಿಜ್ಞಾನ ಮತ್ತು ಮಧ್ಯಾಹ್ನ 2:30ರಿಂದ ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದೆ. ಏಪ್ರಿಲ್‌ 17ರಂದು ಬೆಳಿಗ್ಗೆ 10:30ರಿಂದ ಗಣಿತ ಮತ್ತು ಮಧ್ಯಾಹ್ನ 2:30ರಿಂದ ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಏ.18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಕೆಇಎ ಮಾಹಿತಿ ನೀಡಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್‌, ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ. ಇದೆ ಮೊದಲ ಭಾರಿಗೆ ವರ್ಷದಲ್ಲಿ ನಡೆಯುವ ಎಲ್ಲಾ ವೃತ್ತಿಪರ ಕೋರ್ಸುಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಒಮ್ಮೆಲೇ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ, ಹಕ್ಕುಗಳ ಪ್ರಮಾಣಪತ್ರ, ಅರ್ಜಿಯ ಒಟಿಪಿ (OTP) ಪರಿಶೀಲನೆಯನ್ನು ಮತ್ತಷ್ಟು ವ್ಯವಸ್ಥೆಗಳನ್ನು ಭದ್ರತೆ ಮತ್ತು ಸರಳೀಕರಣ ದೃಷ್ಟಿಯಿಂದ ಅಳವಡಿಸಲಾಗಿದೆ.’ ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ