Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ರಾಜ್ಯೋತ್ಸವ-2024:ಮಾಧ್ಯಮ ಪ್ರತಿನಿಧಿಗಳಿಗೆ ಸನ್ಮಾನ

ಬೆಳಗಾವಿ : ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವಿವಿಧ ವಿಭಾಗಗಳ 11 ಜನ ಪತ್ರಕರ್ತರಿಗೆ ಕರ್ನಾಟಕ ರಾಜ್ಯೋತ್ಸವ-2024ರ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನವೆಂಬರ 1 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ಕನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.

ಸನ್ಮಾನಿತರ ವಿವರ:

ಮುದ್ರಣ ಮಾಧ್ಯಮ ವಿಭಾಗ:
ಪಿ.ಟಿ.ಐ. ಸುದ್ದಿ ಸಂಸ್ಥೆ ವರದಿಗಾರ ಸುಭಾಷ್ ಮದ್ಧುರಾವ ಕುಲಕರ್ಣಿ ಹಾಗೂ ಉದಯವಾಣಿ ದಿನಪತ್ರಿಕೆಯ ಜಿಲ್ಲಾ ಹಿರಿಯ ವರದಿಗಾರ ಭೈರೋಬಾ ಶಿವಾಜಿ ಕಾಂಬಳೆ.

ಪತ್ರಿಕಾ ಛಾಯಾಗ್ರಾಹಕರ ವಿಭಾಗ:

ಏಕನಾಥ ಅಗಸಿಮನಿ.

ವಿದ್ಯುನ್ಮಾನ ಮಾಧ್ಯಮ ವಿಭಾಗ:

ಪ್ರಜಾ ಟಿ.ವಿ. ಜಿಲ್ಲಾ ವರದಿಗಾರ ಚಂದ್ರು ಹಣಮಂತ ಶ್ರೀರಾಮುಡು ಮತ್ತು ಚಿಕ್ಕೋಡಿ ಸುವರ್ಣ ನ್ಯೂಸ್ ವರದಿಗಾರ ಮುಸ್ತಾಕ್‌ಅಹ್ಮದ್ ಸಯ್ಯದ್ ಹುಸೇನ್ ಪೀರಜಾದೆ.

ಟಿವಿ ಕ್ಯಾಮರಾಮೆನ್ ವಿಭಾಗ:

ನ್ಯೂಸ್ ಫರ್ಸ್ಟ್ ಕ್ಯಾಮೆರಾಮನ್ ರೋಹಿತ ನಾರಾಯಣ ಶಿಂಧೆ ಮತ್ತು ಇನ್ ನ್ಯೂಸ್ ಛಾಯಾಗ್ರಾಹಕ ಸುಭಾನಿ ಇಮಾಮಸಾಬ್ ಮುಲ್ಲಾ.

ಜಿಲ್ಲಾ/ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ವಿಭಾಗ:

ಸಮದರ್ಶಿ ದಿನಪತ್ರಿಕೆಯ ಸಂಪಾದಕ ಅಶ್ರಫ್ ಬಾಬಾಸಾಬ್ ಧಾರವಾಡಕರ.

ತಾಲೂಕು ವರದಿಗಾರರ ವಿಭಾಗ:

ಚನ್ನಮ್ಮನ ಕಿತ್ತೂರಿನ ಪ್ರಜಾವಾಣಿ ದಿನಪತ್ರಿಕೆಯ ತಾಲೂಕು ವರದಿಗಾರ ಪ್ರದೀಪ ಮೇಲಿನಮನಿ ಮತ್ತು ಕಾಗವಾಡ ತಾಲೂಕಿನ ಸಂಯುಕ್ತ ಕರ್ನಾಟಕ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ತಾಲೂಕು ವರದಿಗಾರ ಸಿದ್ಧಯ್ಯ ಗಂಗಯ್ಯ ಹಿರೇಮಠ.

ಪತ್ರಿಕಾ ವಿತರಕರ ವಿಭಾಗ:

ಬೈಲಹೊಂಗಲ್ ತಾಲೂಕಿನ ನೇಗಿನಹಾಳ ಗ್ರಾಮದ ಸದೆಪ್ಪ ಫಕೀರಪ್ಪ ಗರಗದ.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಕರ್ನಾಟಕ ರಾಜ್ಯೋತ್ಸವ-2024ರ ಮಾಧ್ಯಮ ಪ್ರತಿನಿಧಿಗಳ ಸನ್ಮಾನ ಆಯ್ಕೆ ಸಮಿತಿ ಸಭೆಯಲ್ಲಿ ಏಳು ವಿಭಾಗಗಳಲ್ಲಿ ಈ 11 ಜನ ಪತ್ರಕರ್ತರುಗಳನ್ನು ಸನ್ಮಾನಿಸಲು ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ