Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮದುವಣಗಿತ್ತಿಯಂತಾದ ಕಿತ್ತೂರು : ಈ ಸಲ ಕಾರ್ಯಕ್ರಮವೇ ಕಾರ್ಯಕ್ರಮ



ಬೆಳಗಾವಿ :ರಾಣಿ ಚನ್ನಮ್ಮ ಅವರ ಸವಿ ನೆನಪಿನಲ್ಲಿ 200ನೇ ಕಿತ್ತೂರು ವಿಜಯೋತ್ಸವದ 200 ನೇ ವರ್ಷಾಚರಣೆ ಸಂಭ್ರಮದಲ್ಲಿ ಈ ವರ್ಷ ರಾಜ್ಯ ಸರಕಾರ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಿದೆ. ಈ ಮೂಲಕ ಕಿತ್ತೂರು ಉತ್ಸವವನ್ನು ನೆನಪಿನಲ್ಲಿ ಉಳಿಯುವ ರೀತಿಯಲ್ಲಿ ಅತ್ಯಂತ ವೈಭವಯುತವಾಗಿ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸುತ್ತಿದೆ. ಇಷ್ಟು ವರ್ಷಗಳ ಕಾಲ ಕಿತ್ತೂರು ಮತ್ತು ಕಾಕತಿಗಳಲ್ಲಿ ಕಿತ್ತೂರು ಉತ್ಸವದ ಅಂಗವಾಗಿ ಕಾರ್ಯಕ್ರಮ ನಡೆಯುತ್ತಿತ್ತು ಆದರೆ ಈ ವರ್ಷ ಬೆಳಗಾವಿ ಹಾಗೂ ಬೈಲಹೊಂಗಲದಲ್ಲೂ ಕಾರ್ಯಕ್ರಮ ಆಯೋಜಿತಗೊಂಡಿದೆ. ಒಟ್ಟಾರೆ ವರ್ಷದಿಂದ ವರ್ಷಕ್ಕೆ ಕಿತ್ತೂರು ಉತ್ಸವ ಅತ್ಯಂತ ವಿಜ್ರಂಣೆಯಿಂದ ನಡೆಯುತ್ತಿರುವುದು ಜಿಲ್ಲೆಯ ಜನತೆಯ ಪಾಲಿಗೆ ಸಂತಸದ ಸಂಗತಿಯಾಗಿದೆ. ವಿಜಯೋತ್ಸವ ಪ್ರಯುಕ್ತ ಬೆಳಗಾವಿಯಲ್ಲಿ ಒಂದು ದಿನ, ಕೋಟೆ ಆವರಣದಲ್ಲಿ ನಾಲ್ಕು ದಿನ ಸೇರಿ ಐದು ದಿನಗಳವರೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಮಂಗಳವಾರ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ದಿನ, ಕಿತ್ತೂರಲ್ಲಿ ನಾಲ್ಕು ದಿನ ಉತ್ಸವದ ವೈವಿಧ್ಯಮ ಕಾರ್ಯಕ್ರಮ ಜರುಗಲಿವೆ. 25ಕ್ಕೆ ಉತ್ಸವದ ಸಮಾರೋಪ ಕಾರ್ಯಕ್ರಮವಿದೆ. ಅನಂತರ ಅ. 26ರಂದು ಅದೇ ಶಾಮಿಯಾನದಲ್ಲಿ ಉತ್ಸವದ ನಿಮಿತ್ತ ಸ್ಥಳೀಯ ಭಜನಾ ತಂಡಗಳಿಗೆ ಸ್ಪರ್ಧೆ ಆಯೋಜಿಸಲಾಗಿದೆ.

ಭಜನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ ₹50,000, ದ್ವಿತೀಯ ₹25,000 ಮತ್ತು ತೃತೀಯ ₹15,000 ನಗದು ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ತಂಡಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಗುತ್ತದೆ.

ಉತ್ಸವದ ಯಶಸ್ಸಿಗಾಗಿ ಅಧಿಕಾರಿಗಳು ಸೇರಿ ಎಲ್ಲರೂ ಶ್ರಮ ವಹಿಸುತ್ತಿದ್ದಾರೆ. ಅಧಿಕ ಸಂಖ್ಯೆಯ ಜನರು ಭಾಗವಹಿಸುವ ನಿರೀಕ್ಷೆಯಿದೆ. ಉತ್ಸವ ಸಿದ್ಧತೆ ಆರಂಭಗೊಂಡ ದಿನದಿಂದಲೂ ಆಗಾಗ್ಗೆ ಸುರಿಯುತ್ತಿರುವ ಮಳೆಯಿಂದ ಅಗತ್ಯ ಕೆಲಸಗಳಿಗೆ ತೀವ್ರ ಅಡಚಣೆ ಉಂಟಾಗಿದೆ. ರಸ್ತೆಯ ಕೆಲ ಕಡೆ ನೀರು ಸಂಗ್ರಹವಾಗಿದ್ದು, ಗುರುವಾರ ಪೇಟೆಯ ರಸ್ತೆ ವಿಸ್ತರಣೆ, ಚರಂಡಿ ನಿರ್ಮಾಣಕ್ಕೆ ತೊಂದರೆ ಆಗಿದೆ.

ಶಾಮಿಯಾನ ನಿರ್ಮಾಣದ ಗುತ್ತಿಗೆದಾರರೂ ಮಳೆಯಿಂದ ತೊಂದರೆ ಅನುಭವಿಸಿದರು. ರಾಡಿಮಯವಾಗಿದ್ದ ಮೈದಾನ ಸ್ವಚ್ಛಗೊಳಿಸಲು ಹರಸಾಹಸಪಟ್ಟರು. ಸೋಮವಾರವೂ ಬೆಳಿಗ್ಗೆ ಮತ್ತು ಸಂಜೆ ಮಳೆ ಸುರಿದಿದ್ದರಿಂದ ಅಂತಿಮ ಸಿದ್ಧತೆಗಳು ಮತ್ತು ಕುಸ್ತಿ ಮೈದಾನ ನಿರ್ಮಾಣಕ್ಕೆ ತೊಂದರೆಯುಂಟಾಯಿತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?