Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಚಿವ ಸತೀಶ ಜಾರಕಿಹೊಳಿಗೆ ಬಹಿರಂಗ ಸವಾಲು ಹಾಕಿದ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ

ಬೆಳಗಾವಿ : ಬುದ್ದ, ಬಸವ, ಅಂಬೇಡ್ಕರ್ ತತ್ವಗಳನ್ನು ನಾನು ಪಾಲಿಸುತ್ತೇನೆ‌.ನಮಗೆ ಬೆಲೆ ಇಲ್ಲದ ಜಾಗದಲ್ಲಿ ಇರಲು ನಾನು ಇಷ್ಟಪಡಲ್ಲ ಎಂದು ಪರೋಕ್ಷವಾಗಿ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ಕುಡಚಿ ಕಾಂಗ್ರೆಸ್ ಶಾಸಕ ಮಹೇಶ ತಮ್ಮಣ್ಣವರ ಹರಿಹಾಯ್ದರು.

ಚಿಕ್ಕೋಡಿ ಪಟ್ಟಣದ ಕಲ್ಲೋಳಕರ ಫಾರ್ಮಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸತೀಶ ಜಾರಕಿಹೋಳಿ ಆರೋಪಕ್ಕೆ ಪ್ರತ್ಯುತ್ತರ ನೀಡಿದ ಅವರು
ಸತೀಶ ಜಾರಕಿಹೊಳಿಗೆ ಮೊದಲಿನಿಂದಲೂ ಸಹಕಾರ ನೀಡಿದ್ದೇವೆ.ಕುಡಚಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 22 ಸಾವಿರ ಮತಗಳ ಲೀಡ್ ನೀಡದೇವೆ.ನನಗೆ ವಿಧಾನಸಭೆ ಚುನಾವಣೆಯಲ್ಲಿ ಬಂದಷ್ಟು‌ ಲೀಡ್ ಎಂಪಿ ಚುನಾವಣೆಯಲ್ಲಿ ನೀಡಲಾಗಿದೆ.ಆದರೆ, ನಾನು ಪಕ್ಷೇತರ ಪರಾಜಿತ ಅಭ್ಯರ್ಥಿ ನಮ್ಮ ಮಾವನವರಾದ ಶಂಭು ಕಲ್ಲೋಳಿಕರ ಪರವಾಗಿ ಕೆಲಸ ಕೆಲಸ ಮಾಡಿದೇನೆ ಎಂದು ಸತೀಶ ಜಾರಕಿಹೋಳಿ ಆರೋಪವನ್ನು ಮಾಡಿದ್ದಾರೆ. ಇದು ಎಷ್ಟರ ಮಟ್ಟಕ್ಕೆ ಸರಿ ಎಂದು ಪ್ರೆಶ್ನಿಸಿದರು?
ನಮ್ಮ ಭಾಗದ ಬಹುಕೇತ ನಾಯಕರನ್ನು ಜಾರಕಿಹೊಳಿ ಫ್ಯಾಮಿಲಿ ರಾಜಕೀಯವಾಗಿ ನಿರ್ನಾಮ‌ ಮಾಡಿದ್ದಾರೆ.
ಕಲ್ಲೋಳಿಕರ ರಾಜಕೀಯವಾಗಿ‌ ಮುಗಿಸಲು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ.
ಪಕ್ಷಕ್ಕೆ ಮೋಸ ಮಾಡುವ ಕೆಲಸ ನಾನು ಮಾಡಲ್ಲ.ನನ್ನ ಕ್ಷೇತ್ರದಲ್ಲಿ ಶಂಭು ಕಲ್ಲೋಳಿಕರಗೆ ಕೇವಲ ಮೂರು ಸಾವಿತ ಮತಗಳು ಬಂದಿವೆ.ಸತೀಶ ಜಾರಕಿಹೊಳಿ ರಾಜ್ಯದಲ್ಲಿಯೇ ಪ್ರಭಾವಿ ನಾಯಕರಿದ್ದಾರೆ.
ನಮ್ಮನ್ನು ತುಳಿಯುವ ಕೆಲಸ ಜಾರಕಿಹೊಳಿ ಫ್ಯಾಮಿಲಿ ಮಾಡುತ್ತಿದೆ‌ ಎಂದು‌ ಆರೋಪದ ಸುರಿಮಳೆಗೈದರು.

ಸತೀಶ್ ಜಾರಕಿಹೊಳಿ ಅವರಿಗೆ ದಲಿತ ಸಮಾಜದ ಮೇಲೆ ಕಳಕಳಿ ಇದ್ದರೆ ದಲಿತ ನಾಯಕರನ್ನು ಬೆಳೆಸುವ ಕೆಲಸ ಮಾಡುತ್ತಿದ್ದರು. ಹೈಕಮಾಂಡ್ ಗೆ ದೂರು ನೀಡಿದರೆ ಅದಕ್ಕೆ ಉತ್ತರ ನೀಡಲು ನಾನು ಸಿದ್ದ. ಮುಂದಿನ ದಿನಗಳಲ್ಲಿ ಅವರು ಗೋಕಾಕ ಹಾಗೂ ಅರಭಾವಿಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ಬರುವಂತೆ ಕೆಲಸ ಮಾಡಿ ತೋರಿಸಲಿ ಎಂದು ಅವರು ಮರು ಸವಾಲು ಹಾಕಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ