Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜನತಾ ದರ್ಶನದಲ್ಲಿ ಸಾವಿರಾರು ಜನರಿಂದ ಅಹವಾಲು ಸ್ವೀಕರಿಸಿದ ಲಕ್ಷ್ಮೀ ಹೆಬ್ಬಾಳಕರ್‌-ಸಚಿವರಿಗೆ ಮೃಣಾಲ್‌ ಸಾಥ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ತಮ್ಮ ಗೃಹಕಚೇರಿಯಲ್ಲಿ ಬುಧವಾರ ಜನತಾ ದರ್ಶನ ನಡೆಸಿದರು. ಸಚಿವರ ಬಳಿ ಅಹವಾಲು ಹೇಳಿಕೊಳ್ಳಲು ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರು ಸೇರಿದಂತೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದಲೂ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.

ಬೆಳಗ್ಗೆ 10 ಗಂಟೆಗೆ ಸರಿಯಾಗಿ ಆರಂಭಗೊಂಡ ಜನತಾ ದರ್ಶನದಲ್ಲಿ ವೈಯಕ್ತಿಕ ಸಮಸ್ಯೆಗಳು, ಗ್ರಾಮದ ಕೆಲಸಗಳು, ಸಮುದಾಯದ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಜನರು ಸಚಿವರ ಬಳಿ ಮನವಿ ಸಲ್ಲಿಸಿದರು.

ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಸಚಿವರು ಪರಿಹಾರ ನೀಡಿದರೆ, ಕೆಲವೊಂದು ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಆಪ್ತ‌ ಸಹಾಯಕರಿಗೆ ಸೂಚನೆ ನೀಡಿದರು. ಸುಮಾರು 4 ಗಂಟೆಗೂ ಹೆಚ್ಚು ಕಾಲ ನಡೆದ ಜನತಾ ದರ್ಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಸಮಾಧಾನಚಿತ್ತದಿಂದ ಜನರ ಸಮಸ್ಯೆಗಳನ್ನು ಆಲಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಜನತಾ ದರ್ಶನ ನಡೆಸುತ್ತಿದ್ದ ವೇಳೆ ಅವರ ಪುತ್ರ ಮೃಣಾಲ್‌ ಹೆಬ್ಬಾಳಕರ್‌ ಸಾಥ್‌ ನೀಡಿದರು. ಜನರ ಕೆಲವೊಂದು ಸಮಸ್ಯೆಗಳನ್ನು ಮೃಣಾಲ್‌ ಹೆಬ್ಬಾಳಕರ್‌ ಅವರೂ ಅಲಿಸಿ, ಪರಿಹಾರ ನೀಡಿದರು.
ಜನರ ಸಮಸ್ಯೆಗಳಿಗೆ ಸಚಿವರ ಸಕಾರಾತ್ಮಕ ಸ್ಪಂದನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಯಿತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು