Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಆಕ್ರೋಶ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡಿದ್ದಾರೆ.

ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಮೆರವಣಿಗೆ ನಡೆಸಿ, ಸಿ‌.ಟಿ ರವಿ ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದರು. ಮೆರವಣಿಗೆಯಲ್ಲಿ ಸಿಟಿ ರವಿ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿಗೆ ಸೀರೆ ಉಡಿಸಿ ಆಕ್ರೋಶ ಹೊರಹಾಕಿದರು. ಚನ್ನಮ್ಮ ವೃತ್ತದಲ್ಲಿ ಪ್ರತಿಕೃತಿ ಸುಟ್ಟು ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರ ಹಾಕಿದರು.‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿಟಿ ರವಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಈ ವೇಳೆ ಹೋರಾಟಗಾರರು ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ಶೋಕ ಸೂಚಿಸುವ ಹಾಡುಗಳನ್ನು ಹಾಕಿ ಸಿಟಿ ಸತ್ನಪ್ಪೊ ಸತ್ನೋ ಎಂದು ಬೊಬ್ಬೆ ಹೊಡೆದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು, ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.‌ ಸಿ‌.ಟಿ.ರವಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಷ್ಟೇ ಅಲ್ಲ. ಇಡೀ ಸ್ತ್ರೀಕುಲಕ್ಕೆ ಅಪಮಾನ ಮಾಡಿದ್ದಾರೆ. ಸಿ.ಟಿ.ರವಿ ಕ್ಷಮೆಯಾಚಿಸಬೇಕು, ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಬೇಕೆಂದು ಅಭಿಮಾನಿಗಳು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲೆಡೆಯಿಂದ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ಸಹ ಬಹಳ ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಒಂದು ಕ್ಷಣವೂ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಯುವ ಹಕ್ಕು ಸಿ.ಟಿ.ರವಿಗೆ ಇಲ್ಲ. ಅಂತವರನ್ನು ಬಿಜೆಪಿ ತಕ್ಷಣ ಹೊರಹಾಕಬೇಕು. ಮಾತೆತ್ತಿದರೆ ಭಾರತ್ ಮಾತಾಕಿ ಜೈ, ಜೈ ಶ್ರೀರಾಮ ಎನ್ನುವ ಬಿಜೆಪಿ ಸ್ತ್ರೀಯರಿಗೆ ಹೆಜ್ಜೆ ಹೆಜ್ಜೆಗೂ ಅವಮಾನ ಮಾಡುತ್ತಿದೆ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ