Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಐಎಎಸ್ ದಂಪತಿಯ ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಮುಂಬೈ: ಮಹಾರಾಷ್ಟ್ರದ ಐಎಎಸ್ ದಂಪತಿಯ ಪುತ್ರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ.

ಮಹಾರಾಷ್ಟ್ರ ಕೇಡರ್ ಹಿರಿಯ ಐಎಎಸ್ ಅಧಿಕಾರಿಗಳಾದ ವಿಕಾಸ್ ರಸ್ತೋಗಿ ಹಾಗೂ ರಾಧಿಕಾ ರಸ್ತೋಗಿ ಅವರ 27 ವರ್ಷದ ಪುತ್ರಿ ಲಿಪಿ ಆತ್ಮಹತ್ಯೆ ಮಾಡಿಕೊಂಡವರು.

ಬೆಳಗಿನ ಜಾವ ದಕ್ಷಿಣ ಮುಂಬೈನ ಸೆಕ್ರೇಟರಿಯೇಟ್ ಬಳಿ ಇರುವ ರಸ್ತೋಗಿ ದಂಪತಿ ವಾಸಿಸುತ್ತಿದ್ದ ವಸತಿ ಸಮುಚ್ಚಯದ 10ನೇ ಮಹಡಿಯಿಂದ ಜಿಗಿದು ಲಿಪಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಜಿ.ಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಹರಿಯಾಣದ ಸೋನಿಪತ್‌ನಲ್ಲಿ ಎಲ್‌ಎಲ್‌ಬಿ ಓದುತ್ತಿದ್ದ ಲಿಪಿ ಅವರು ಇತ್ತೀಚೆಗೆ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದ್ದು, ಅವರು ಸಾಯುವ ಮುನ್ನ ಮರಣ ಪತ್ರ ಬರೆದಿಟ್ಟಿದ್ದರು. ಅದರಲ್ಲಿ ನನ್ನ ಸಾವಿಗೆ ನಾನೇ ಹೊಣೆ, ಯಾರು ಕಾರಣರಲ್ಲ ಎಂದು ಬರೆದುಕೊಂಡಿದ್ದಾರೆ. ಈ ಕುರಿತು ಪರೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಕಾಸ್ ರಸ್ತೋಗಿ ಅವರು ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ರಾಧಿಕಾ ರಸ್ತೋಗಿ ಅವರು ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

2017ರಲ್ಲೂ ಇಂತಹದೇ ಒಂದು ಘಟನೆ ಮುಂಬೈನಲ್ಲಿ ನಡೆದಿತ್ತು. ಐಎಎಸ್ ದಂಪತಿಯಾದ ಮಿಲಿಂದ್ ಮಹಿಶ್‌ಕ‌ರ್ ಹಾಗೂ ಮನಿಶಾ ದಂಪತಿಯ 18 ವರ್ಷದ ಪುತ್ರ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?