Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಫ್ ಆರ್ ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ವಿಧಾನಸೌಧ (ವಿಧಾನ ಪರಿಷತ್) : ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಸೋಮವಾರದಿಂದ ಆರಂಭಗೊಂಡ ಮಳೆಗಾಲದ ಅಧಿವೇಶನದ ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಕೇಳಿದ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಗರ್ಭಿಣಿ, ಬಾಣಂತಿಯರು, ಕಿಶೋರಿಯರು ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆ ಸೇರಿದಂತೆ ಆರೋಗ್ಯದ ಮೇಲೆ ನಿಗಾ ವಹಿಸಲು ಫಲಾನುಭವಿಗಳಿಗೆ ಫೇಸ್ ಕ್ಯಾಪ್ಚರ್ ಮೂಲಕ ಸರಬರಾಜು ಮಾಡುವಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಕರ್ನಾಟಕದಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಪಾರದರ್ಶಕತೆ ತರಲು ಇದು ಸಹಕಾರಿಯಾಗಲಿದೆ ಎಂದರು.

ಈ ತಂತ್ರಾಂಶದ ಜಾರಿಗೊಳಿಸಿದ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ, ಪ್ರಸ್ತುತ ಶೇಕಡ 94.2 ರಷ್ಟು ಫಲಾನುಭವಿಗಳನ್ನು ಎಫ್‌ ಆರ್‌ಎಸ್‌ ಮೂಲಕ ನೋಂದಣಿ ಮಾಡುವ ಮೂಲಕ ಇಡೀ ದೇಶಕ್ಕೆ 2ನೇ ಸ್ಥಾನದಲ್ಲಿದೆ ಎಂದು ಸಚಿವರು ಉತ್ತರಿಸಿದರು.

ರಾಜ್ಯದ ಅಂಗನವಾಡಿ ಕೇಂದ್ರಗಳಿಂದ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಕೆಯಾಗುತ್ತಿರುವ ಆಹಾರ ವ್ಯವಸ್ಥೆಗೆ ಮತ್ತಷ್ಟು ಪಾರದರ್ಶಕತೆ ತರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

ಎಫ್‌ಆರ್‌ಎಸ್‌ ಜಾರಿಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಕೆಲಸದ ಒತ್ತಡ ಜಾಸ್ತಿಯಾಗುತ್ತಿದೆ. ಹೀಗಾಗಿ ಅವರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಉತ್ತರಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ವರ್ಷ ಹೊಸ ಮೊಬೈಲ್‌ ಕೊಡಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ನಿರ್ದೇಶನದ ಮೇಲೆ ಎಫ್‌ಆರ್‌ಎಸ್‌ ಮೂಲಕ ಫಲಾನುಭವಿಗಳನ್ನು ಗುರುತಿಸಬೇಕು. ಎಫ್‌ಆರ್‌ಎಸ್‌ ಮೂಲಕ ಮೊಬೈಲ್‌ ಸಂಖ್ಯೆಯನ್ನು ಆಧಾರ್‌ ಸಂಖ್ಯೆಗೆ ಜೋಡಣೆ ಮಾಡದಿದ್ದರೆ, ಕೇಂದ್ರ ಸರ್ಕಾರದಿಂದ ಐಸಿಡಿಎಸ್ ಕಾರ್ಯಕ್ರಮಗಳಿಗೆ ಆಹಾರ ಪದಾರ್ಥಗಳು ಬರುವುದು ನಿಲ್ಲುತ್ತದೆ. ಹೀಗಾಗಿ ಫಲಾನುಭವಿಗಳಿಗೆ ಪಾರದರ್ಶಕವಾಗಿ ಆಹಾರ ತಲುಪಿಸುವ ಸಲುವಾಗಿ ಎಫ್‌ಆರ್‌ಎಸ್‌ ಜಾರಿ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಫ್‌ಆರ್‌ಎಸ್‌ ತಂತ್ರಜ್ಞಾನವನ್ನು ಮತ್ತಷ್ಟು ಸರಳಿಕರಿಸಲಾಗುವುದು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ