Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಏಪ್ರಿಲ್, ಮೇ ತಿಂಗಳಲ್ಲಿ ಬೆಳಗಾವಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ

ಬೆಳಗಾವಿ:ರಾಜ್ಯದಲ್ಲಿ ಈ ವರ್ಷದ ಬೇಸಿಗೆಯಲ್ಲಿ ಮತ್ತೊಂದು ಚುನಾವಣೆ ನಡೆಯುವ ಸಾಧ್ಯತೆ ಇದೆ. 2023 ರ ಬೇಸಿಗೆಯಲ್ಲಿ ಕರ್ನಾಟಕ ವಿಧಾನಸಭೆ 2024 ರಲ್ಲಿ ದೇಶದ ಲೋಕಸಭೆಗೆ ಚುನಾವಣೆ ಬೇಸಿಗೆಯಲ್ಲಿ ನಡೆದಿತ್ತು. ಇದೀಗ ಈ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿದರು.

ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಕಾರಣ ಚುನಾವಣೆ ವಿಳಂಬವಾಗಿವೆ. ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದ ತಕ್ಷಣ ಚುನಾವಣೆ ಘೋಷಿಸಲಾಗುವುದು. ವಿದ್ಯುನ್ಮಾನ ಮತಪೆಟ್ಟಿಗೆ ಬದಲು ಮತಪತ್ರಗಳನ್ನೇ ಬಳಸುವ ಉದ್ದೇಶವಿದ್ದು, ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರತಿ ಸಲ ಚುನಾವಣೆ ಮುಗಿದ ಬಳಿಕ ಇವಿಎಂ ಯಂತ್ರಗಳ ವಿಶ್ವಾಸಾರ್ಹತೆ ಪ್ರಶ್ನಿಸಲಾಗುತ್ತದೆ. ರಾಜಕೀಯ ಪಕ್ಷಗಳ ನಾಯಕರು ಮತ್ತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ, ಮತಪತ್ರಗಳ ಬಳಕೆ ಬಗ್ಗೆ ತೀರ್ಮಾನಿಸಲಾಗುವುದು' ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 91 ಜಿಲ್ಲಾ ಪಂಚಾಯಿತಿ ಮತ್ತು 301 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲಾಗಿದೆ. ಹೊಸದಾಗಿ 7 ಪಟ್ಟಣ ಪಂಚಾಯಿತಿಗಳು ರಚನೆಯಾಗಿದ್ದು, ಈ ಚುನಾವಣೆಗಳನ್ನೂ ಇದೇ ವೇಳೆ ನಡೆಸುವ ಸಾಧ್ಯತೆ ಇದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ