Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಕಾರಿನ ಮೇಲೆ ಬಿದ್ದ ಲಾರಿ

ಬೆಳಗಾವಿ: ಬೆಳಗಾವಿ ಕೆಎಲ್‌ಇ ಆಸ್ಪತ್ರೆ ಸನಿಹದ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಲಾರಿಯೊಂದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಒಬ್ಬರನ್ನು ಹೊರ ತೆಗೆಯಲಾಗಿದೆ. ಇನ್ನಿಬ್ಬರ ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರ ತೆಗೆಯಲಾಯಿತು.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿದೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ.

ಘಟನೆ ವಿವರ : ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಉರುಳಿಬಿದ್ದಿದೆ. ಬೆಳಗಾವಿಯಲ್ಲಿ ನಡೆದ ಈ ಅಪಘಾತದಲ್ಲಿ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಬಿದ್ದರೂ, ಕಾರ್‌ನಲ್ಲಿದ್ದ ಇಬ್ಬರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. KA25 MD 6506 ಸಂಖ್ಯೆಯ ಕಾರ್ ಮೇಲೆ ಕ್ಯಾಂಟರ್ ಬಿದ್ದಿದ್ದು, ಎಲ್ಲರೂ ಸಾವಿನಿಂದ ಪಾರಾಗಿದ್ದಾರೆ.

ಕಾರಿನ ಒಳಗೆ ಇಬ್ಬರು ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಬೆಳಗಾವಿಯ ಕೆ.ಎಲ್.ಇ ಬಳಿಯ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದವರನ್ನು ರಕ್ಷಿಸಲು ದೊಡ್ಡ ಮಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಪ್ರಯಾಣಿಕರು ಪಾರಾದ ರೀತಿಗೇ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಶೋಕ್‌ ಲೇಲ್ಯಾಂಡ್‌ ಕಂಪನಿಯ ಕಾಂಕ್ರಿಟ್‌ ಲಾರಿ ಬಿದ್ದ ರಭಸಕ್ಕೆ ಇಡೀ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಈ ವೇಳೆ ಕಾರ್‌ನ ಒಳಗಡೆಯ ಇಬ್ಬರು ಪ್ರಯಾಣಿಕರಿದ್ದರು. ಘಟನೆ ನಡೆದ ಬೆನ್ನಲ್ಲಿಯೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಿದ್ದರು.

ರಕ್ಷಣೆಗೆ ಒಳಗಾದ ಮೂವರ ಪೈಕಿ ಇಬ್ಬರನ್ನು ಪರಪ್ಪ ಬಾಳಿಕಾಯಿ, ನಿಂಗಪ್ಪ ಕೊಪ್ಪದ ಎಂದು ಗುರುತಿಸಲಾಗಿದೆ. ಧಾರವಾಡದಿಂದ ಬೆಳಗಾವಿಗೆ ಬರುವಾಗ ಈ ಘಟನೆ ನಡೆದಿದೆ. ಸಂಬಂಧಿಗಳ ಆಗಮನಕ್ಕಾಗಿ ಸರ್ವೀಸ್ ರಸ್ತೆ ಬದಿ ಕಾರು ಪಾರ್ಕ್ ಮಾಡಿ ಕಾಯುತ್ತಿದ್ದರು ಎನ್ನಲಾಗಿದೆ.

ಕೇವಲ 15 ನಿಮಿಷದಲ್ಲೇ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸ್ಥಳೀಯ ಜನರು, ಎರಡು ಕ್ರೇನ್ ಬಳಸಿ ಕಾರ್‌ನಲ್ಲಿದ್ದವರನ್ನು ರಕ್ಷಿಸಲಾಗಿದೆ. ಲಾರಿಯನ್ನು ಮೊದಲಿಗೆ ಕ್ರೇನ್‌ ಮೂಲಕ ಮೇಲೆತ್ತಲಾಗಿದೆ. ಅನಂತರ ಲಾರಿ ಅಡಿಯಲ್ಲಿದ್ದ ಕಾರನ್ನು ಸಾರ್ವಜನಿಕರು ಹೊರಗೆ ತೆಗೆದಿದ್ದಾರೆ. ಇಬ್ಬರನ್ನೂ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ