Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಮಲ ಮುಡಿದ ಸುಮಲತಾ

 

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನದ ಹೆಸರಿನಲ್ಲಿ ಪಕ್ಷೇತರವಾಗಿ ನಿಂತು ಗೆದ್ದ ಸುಮಲತಾ‌‌ ಅಂಬರೀಶ್ ಇದೀಗ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.

ಎರಡು ದಿನಗಳ ಹಿಂದೆ ಮಂಡ್ಯದಲ್ಲಿ ಅಭಿಮಾನಿಗಳ ಸಮಾವೇಶ ನಡೆಸಿದ್ದ ಸುಮಲತಾ ಮುಂದಿನ ರಾಜಕೀಯ ನಡೆಯ ಬಗ್ಗೆ ಘೋಷಣೆ ಮಾಡಿದ್ದರು.

ಅದರಂತೆ ಅಧಿಕೃತವಾಗಿ ಶುಕ್ರವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದರು. ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.
ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.‌

ಮಂಡ್ಯದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನಡೆ ಉಂಟು ಮಾಡಿದೆ. ಎನ್ ಡಿ ಎ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡ್ತಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಸುಮಲತಾ ಅಂಬರೀಶ್ ‌ಈ‌ ಹಿಂದೆ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ ಆಗಿರಲಿಲ್ಲ. ಈ ಬಗ್ಗೆ ಪಕ್ಷದ ಕೆಲವು ನಾಯಕರಿಗೂ ಆಕ್ಷೇಪ ಇತ್ತು.

ಇದೇ ಸಂದರ್ಭದಲ್ಲಿ ಮಾಜಿ‌ ಕ್ರಿಕೆಟ್ ಆಟಗಾರ ದೊಡ್ಡ ಗಣೇಶ್, ಮಾಜಿ ಕಾಂಗ್ರೆಸ್ ಮುಖಂಡ ಎಸ್. ಶಿವರಾಮೇಗೌಡ ಹಾಗೂ ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ನರೇಂದ್ರ ಮೋದಿ ನಾಯಕತ್ವ ಮೆಚ್ಚಿ ದೇಶದಲ್ಲಿ ಬಿಜೆಪಿ ಪರವಾಗಿ ವಾತಾವರಣ ನಿರ್ಮಾಣವಾಗಿದೆ. 400 ಹೆಚ್ಚು ಸ್ಥಾನಗಳೊಂದಿಗೆ ಎನ್ ಡಿ ಎ ಅಧಿಕಾರಕ್ಕೆ ಬರಬೇಕು ಎಂಬುದು ಸಾಮಾನ್ಯರ ಅಭಿಪ್ರಾಯವಾಗಿದೆ. ಮೋದಿ ಮತ್ತೊಮ್ಮೆ ಎಂಬ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ.
ಪರಿಣಾಮವಾಗಿ ಯಾವುದೇ ಸಚಿವರು ಸ್ಪರ್ಧೆಗೆ ಮುಂದಾಗಿಲ್ಲ ಎಂದರು. ಸುಮಲತಾ ಎಲ್ಲಾ ಅನುಮಾನಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ದೇಶದ ಅಭಿವೃದ್ಧಿ ಹಾಗೂ ಸುರಕ್ಷಿತೆ ದೃಷ್ಟಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ನಿಟ್ಟಿನಲ್ಲಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ ಎಂದರು. ಸುಮಲತಾ ಸೇರ್ಪಡೆಯಿಂದ ಮಂಡ್ಯಕ್ಕೆ ಮಾತ್ರವಲ್ಲ, ರಾಜ್ಯಕ್ಕೆ ದೊಡ್ಡ ಶಕ್ತಿ ಹಾಗೂ ಸಂದೇಶ ಕೊಟ್ಟಂತಾಗಿದೆ ಎಂದು ಹೇಳಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು