Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎನ್‌ಡಿಎಗೆ ಬಹುಮತ ಎಂದ ಹಲವು ಮತಗಟ್ಟೆ ಸಮೀಕ್ಷೆಗಳು

ಬೆಂಗಳೂರು: ಮಂಗಳವಾರ ಸಂಜೆ 7ಕ್ಕೆ ಎರಡನೇ ಹಂತದ ಮತದಾನ ಅಂತ್ಯಗೊಳ್ಳುವ ಮೂಲಕ ಬಿಹಾರ ವಿಧಾನಸಭಾ ಚುನಾವಣೆ ಅಂತ್ಯವಾಗಿದ್ದು ಎಲ್ಲರ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ.

ಇದಕ್ಕೂ ಮುನ್ನ ಹಲವು ಸಂಸ್ಥೆಗಳು ಬಿಹಾರ ವಿಧಾನಸಭೆ ಚುನಾವಣೆಗೆ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗವಾಗಿದ್ದು ಹಲವು ಸಮೀಕ್ಷೆಗಳು ಎನ್‌ಡಿಎಗೆ ಬಹುಮತ ಸಿಗಲಿವೆ ಎಂದು ಅಂದಾಜಿಸಿವೆ.

ಚುನಾವಣೆಯಲ್ಲಿ ನಿತೀಶ್‌ ಕುಮಾರ್‌ ಅವರ ಜೆಡಿಯು, ಬಿಜೆಪಿ, ಚಿರಾಗ್‌ ಪಾಸ್ವಾನ್‌ ಅವರ ಎಲ್‌ಜೆಪಿ ಒಂದಾಗಿ ಸ್ಪರ್ಧೆ ಮಾಡಿದ್ದವು. ಮತ್ತೊಂದೆಡೆ ಮಹಾಘಟಬಂಧನ್‌ನಲ್ಲಿ ಕಾಂಗ್ರೆಸ್‌ ಮತ್ತು ತೇಜಸ್ವಿ ಯಾದವ್‌ ಅವರ ಆರ್‌ಜೆಡಿ ಒಂದಾಗಿದ್ದವು. ಮತ್ತೊಂದೆಡೆ ಚುನಾವಣಾ ಚಾಣಕ್ಯ ಖ್ಯಾತಿಯ ಪ್ರಶಾಂತ್‌ ಕಿಶೋರ್‌ ಅವರ ಜನ್‌ ಸೂರಾಜ್‌ ಪಕ್ಷವು ಮೊದಲ ಬಾರಿಗೆ ಸ್ಪರ್ಧೆ ಮಾಡಿತ್ತು.

ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದೆ. ಎಲ್ಲಾ ಸಮೀಕ್ಷೆಗಳ ಪ್ರಕಾರ ಬಿಜೆಪಿ-ಜೆಡಿಯು-ಎಲ್‌ಜೆಪಿಯ ಎನ್‌ಡಿಎ ಮೈತ್ರಿಕೂಟ ಸಂಪೂರ್ಣ ಬಹುಮತ ಪಡೆಯುತ್ತಿದೆ. ಮಹಾಘಟಬಂಧನ್‌ ಕೂಟವು ಎರಡನೇ ಸ್ಥಾನ ಪಡೆಯಬಹುದು ಎನ್ನುತ್ತಿದೆ ವರದಿ.

ಸಮೀಕ್ಷೆಗಳ ಪ್ರಕಾರ, ಪ್ರಶಾಂತ್‌ ಕಿಶೋರ್‌ ಅವರ ಜನ್‌ ಸೂರಾಜ್‌ ಪಕ್ಷವು (ಜೆಎಸ್‌ಪಿ) ನಿರೀಕ್ಷಿತ ಮಟ್ಟದ ಜನಬೆಂಬಲ ಪಡೆಯುವಲ್ಲಿ ವಿಫಲವಾಗಿದೆ.

ದೈನಿಕ್‌ ಭಾಸ್ಕರ್ ಸಮೀಕ್ಷೆ ಪ್ರಕಾರ ಎನ್‌ಡಿಎ 145ರಿಂದ 160 ಸೀಟು ಪಡೆಯಬಹುದು. ಮಹಾಘಟಬಂಧನ್‌ 73ರಿಂದ 91, ಜೆಎಸ್‌ಪಿ 0-3 ಮತ್ತು ಇತರರು 5ರಿಂದ 7 ಸ್ಥಾನ ಪಡೆಯಬಹುದು.

ಜೆವಿಸಿ ಸಮೀಕ್ಷೆ ಪ್ರಕಾರ ಎನ್‌ಡಿಎ 135ರಿಂದ 150 ಸೀಟು ಪಡೆಯಬಹುದು. ಮಹಾಘಟಬಂಧನ್‌ 88ರಿಂದ 103, ಜೆಎಸ್‌ಪಿ 0-1 ಮತ್ತು ಇತರರು 3ರಿಂದ 6 ಸ್ಥಾನ ಪಡೆಯಬಹುದು.

ಚಾಣಕ್ಯ ಸ್ಟ್ರಾಟಜೀಸ್, ದೈನಿಕ್ ಭಾಸ್ಕರ್, ಜೆವಿಸಿ, ಮ್ಯಾಟ್ರಿಜ್, ಪಿ-ಮಾರ್ಕ್ ಮತ್ತು ಪೀಪಲ್ಸ್ ಇನ್‌ಸೈಟ್ ಸೇರಿದಂತೆ ಎಲ್ಲಾ ಸಮೀಕ್ಷಕರು ಪ್ರಶಾಂತ ಕಿಶೋರ ಅವರ ಪಕ್ಷವು ಎರಡಂಕಿಯ ಗಡಿಯನ್ನು ದಾಟುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಜೆವಿಸಿ ಎಕ್ಸಿಟ್ ಪೋಲ್ ಪ್ರಕಾರ, ಎನ್‌ಡಿಎ 135 ರಿಂದ 150 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, ಪೀಪಲ್ಸ್ ಪಲ್ಸ್ ಮತ್ತು ಪೀಪಲ್ಸ್ ಇನ್‌ಸೈಟ್ ಬಿಹಾರದಲ್ಲಿ ಆಡಳಿತಾರೂಢ ಮೈತ್ರಿಕೂಟವು ಕನಿಷ್ಠ 133 ಸ್ಥಾನಗಳನ್ನು ಗಳಿಸಲಿದೆ ಎಂದು ಭವಿಷ್ಯ ನುಡಿದಿದೆ.
ಆರ್‌ಜೆಡಿ ನೇತೃತ್ವದ ಮಹಾಘಟಬಂಧನವು (Mahagathbandhan) ಎರಡನೇ ಸ್ಥಾನದಲ್ಲಿದೆ. ದೈನಿಕ್ ಭಾಸ್ಕರ್ ಎಕ್ಸಿಟ್ ಪೋಲ್ ‘ಇಂಡಿಯಾ’ ಮೈತ್ರಿಕೂಟಕ್ಕೆ 73 ರಿಂದ 91 ಸ್ಥಾನಗಳನ್ನು ನೀಡಿದರೆ ಜೆವಿಸಿ 88 ರಿಂದ 103 ಮತ್ತು ಮ್ಯಾಟ್ರಿಜ್ 70-90 ಸ್ಥಾನಗಳನ್ನು ಊಹಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ