Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾಷಾ ಅಲ್ಪಸಂಖ್ಯಾತರ ಆಯೋಗದ ಆದೇಶ ಜಾರಿಗೊಳಿಸಲು ಎಂಇಎಸ್ ಮನವಿ

ಬೆಳಗಾವಿ: ಭಾಷಾ ಅಲ್ಪಸಂಖ್ಯಾತರ ಆಯೋಗದ ಆದೇಶವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಮಹಾರಾಷ್ಟ್ರ ಏಕೀಕರಣ ಸಮೀತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.‌

ಜಿಲ್ಲಾಧಿಕಾರಿ ಮೋಹಮ್ಮದ ರೋಷನ್ ಅವರಿಗೆ ಮನವಿ ಸಲ್ಲಿಸಿದ ಅವರು, ಕನ್ನಡದೊಂದಿಗೆ ಮರಾಠಿ ಭಾಷೆಯಲ್ಲಿಯೂ ಪತ್ರಗಳು ನೀಡಬೇಕು.‌ ಜೊತೆಗೆ ಮರಾಠಿಯಲ್ಲಿ ಫಲಕಗಳನ್ನು 15 ದಿನದೊಳಗಾಗಿ ಅಳವಡಿಸಿಬೇಕು.‌ ಇಲ್ಲವಾದರೆ ಉಗ್ರ ಹೋರಾಟ ನಡೆಸುವದಾಗಿ ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ಡಿಸಿ ಮೊಹ್ಮದ್ ರೋಷನ್ ಅವರು, ಯಾರಿಗೂ ಕಾನೂನು ಸುವ್ಯವಸ್ಥೆ ಕೈಗೆ ತೆಗೆದುಕೊಳ್ಳಲು ಅವಕಾಶವಿಲ್ಲ ಎಂದರು.

ಅಮರ್ ಯಳ್ಳೂರಕರ ಅವರು ಮಾತನಾಡಿ, ಕನ್ನಡ ಅನುಷ್ಠಾನ ಸಮಿತಿಯ ಸಭೆಯ ಬಳಿಕ ಸ್ಥಳೀಯ ಸಂಸ್ಥೆಗಳು ಅಲ್ಪ ಸಂಖ್ಯಾತರ ಆಯೋಗದ ಆದೇಶವನ್ನು ಮರೆತು ಕಾನೂನುಬಾಹಿರವಾಗಿ ಕನ್ನಡ ಕಡ್ಡಾಯವನ್ನು ಜಾರಿಗೊಳಿಸಿದೆ. ಕಾನೂನು ಬಾಹಿರ ಆದೇಶ ಜಾರಿಗೊಳಿಸಿರುವ ಬೆಳಗಾವಿ ಮಹಾಪಾಲಿಕೆ ಆಯುಕ್ತರ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೇ, ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ಮಾಜಿ ಶಾಸಕ ಮನೋಹರ ಕಿಣೇಕರ ಮಾತನಾಡಿ, ಭಾಷಿಕ ಅಲ್ಪಸಂಖ್ಯಾತರ ಸಭೆಯಲ್ಲಿ ಬೆಳಗಾವಿ ಜಿಲ್ಲಾಡಳಿತವು ಅಲ್ಪಸಂಖ್ಯಾತರ ಕಾನೂನಿನ ಪ್ರಕಾರ ಬೆಳಗಾವಿಯಲ್ಲಿ ಎರಡು ಭಾಷೆಯಲ್ಲಿ ಕಾಗದಪತ್ರಗಳನ್ನು ನೀಡಲು ಮತ್ತು ಫಲಕಗಳನ್ನು ಅಳವಡಿಸಲು ಒಪ್ಪಿಕೊಂಡಿತ್ತು. ಆದರೇ, ಈಗ ತನ್ನ ನಿರ್ಣಯದಿಂದ ಹಿಂದೆ ಸರಿದು ಇಬ್ಬಗೆಯ ನೀತಿಯನ್ನು ತಳೆದಿದೆ. ಮುಂಬರುವ 10-15 ದಿನಗಳಲ್ಲಿ ಅಲ್ಪಸಂಖ್ಯಾತ ಆಯೋಗದ ಆದೇಶವನ್ನು ಜಾರಿಗೊಳಿಸಿದ್ದರೇ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದರು. ಅಲ್ಲದೇ, ಮರಾಠಿ ಭಾಷಿಕರಿಗೆ ವಿನಾ ಕಾರಣ ತೊಂದರೆ ನೀಡುವ ಪ್ರತಿಭಟನಾಕಾರರಿಗೆ ಪೊಲೀಸ್ ಇಲಾಖೆ ತಿಳುವಳಿಕೆ ನೀಡದಿದ್ದರೇ, ತಕ್ಕ ಉತ್ತರ ಕೊಡಬೇಕಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಲೋಜಿರಾವ್ ಅಷ್ಟೇಕರ, ಪ್ರಕಾಶ್ ಮರಗಾಳೆ, ಆರ್.ಎಂ. ಚೌಗುಲೆ, ವಿಲಾಸ್ ಘಾಡಿ, ವಿಜಯ್ ಪಾಟೀಲ್, ಎಂ.ಆರ್. ಬಿರ್ಜೆ, ಆರ್.ಸಿ. ಮೋದಗೆಕರ, ಎಲ್.ಜಿ. ಪಾಟೀಲ್, ಆರ್.ಎಂ. ಪಾಟೀಲ್. ವಿಕಾಸ್ ಕಲಘಟಗಿ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ