Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ನೆರವು: ಜಾತ್ರೆಗೆ ಸಜ್ಜಾಗುತ್ತಿದೆ ಶಿಂದೋಳಿ

 

 

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಸಂಜೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡಿಸಲಾಗಿದೆ. ಸುಮಾರು 15 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿದ್ದು, ಜಾತ್ರೆಗೆ ಬೇಕಾಗಿರುವ ಸಕಲ ಸಹಕಾರ ಕೊಡುವುದಾಗಿ ಭರವಸೆ ನೀಡಿರುವ ಸಚಿವರು, ಜಾತ್ರೆ ಯಶಸ್ವಿಯಾಗಿ ನಡೆಯಬೇಕು ಎನ್ನುವ ಸಂಕಲ್ಪ ಮಾಡಿದ್ದಾರೆ.
ಜಾತ್ರೆ ಹತ್ತಿರದಲ್ಲಿರುವ ಕಾರಣ ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಗ್ರಾಮದ ಮುಖಂಡರೊಂದಿಗೆ ಈಗಾಗಲೆ 2 -3 ಸುತ್ತಿನ ಸಭೆ ನಡೆಸಿರುವ ಚನ್ನರಾಜ ಹಟ್ಟಿಹೊಳಿ, ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸಿದ್ಧತಾ ತಂಡಕ್ಕೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಪಿಡಿಓ ಶ್ರೀದೇವಿ ಹಿರೇಮಠ್, ಸುರೇಶ ಪಾಟೀಲ, ರಾಕೇಶಗೌಡ ಪಾಟೀಲ, ಶಿವು ಸೈಬಣ್ಣವರ, ಶೈಲಾ ತಿಪ್ಪಣ್ಣಗೋಳ, ರಾಜು ಪಾಟೀಲ, ಕೃಷ್ಣ ಅನಿಗೋಳ್ಕರ್, ಸುರೇಶ ಮುಚ್ಚಂಡಿ, ಲಕ್ಷ್ಮಣ ಹಲಗೇಕರ್, ಭರ್ಮಾ ಶಹಾಪೂರಕರ್, ಯಲ್ಲಪ್ಪ ಶಹಾಪೂರಕರ್, ಲಕ್ಷ್ಮಣ ಅಗಸಿಮನಿ, ನಾಗೇಶ್ ದೇಸಾಯಿ, ಮಲ್ಲಾರ್ದ ಮುಚ್ಚಂಡಿ, ಪಿಂಟು ಮಲ್ಲವ್ವಗೋಳ, ಗಜು ಕಣಬರ್ಕರ್, ನಿಂಗಪ್ಪ ಮೊದಗೇಕರ್, ಗುಂಡು ತಳವಾರ, ಮಲ್ಲಪ್ಪ ತಿಪಣ್ಣಗೋಳ, ನಾಗೇಂದ್ರ ಕುರುಬರ, ಲಕ್ಷ್ಮಣ ಪೂಜೇರಿ ಹಾಗೂ ಅಪಾರ ಸಂಖ್ಯೆಯಲ್ಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ