Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತುಮಕೂರು: ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ತುಮಕೂರಿನ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚಳವಾಗಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,
ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ಚೇರ್ ಖಾಲಿ ಇಲ್ಲ ಎಂದರು.

ಇನ್ನು ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ. ಯಾರು ಜಿ‌ಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ, ಅಂತಹವರದ್ದು ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು‌

ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ಶೀಘ್ರವೇ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.

*ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರ*

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ‌ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ ಸರ್ಕಾರದ ಮೊತ್ತ ಸೇರಿಸಿ ಸಂಬಳ ನೀಡಬೇಕಾಗುತ್ತದೆ. ಕೇಂದ್ರದಿಂದ ಹಣ ಇನ್ನೂ ಬಂದಿಲ್ಲ. ಈಗಾಗಲೇ ನಾವು ಮೂರು ನಾಲ್ಕು ಬಾರಿ ಪತ್ರ ಬರೆದಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಮ್ಮ ಇಲಾಖೆ ನಿರ್ದೇಶಕರು ಮೊನ್ನೆಯಷ್ಟೇ ದೆಹಲಿಗೆ ಹೋಗಿ ಬಂದಿದ್ದಾರೆ. ಆದಷ್ಟು ಬೇಗ ನೀಡಲಾಗುವುದು. ಗಣಪತಿ ಹಬ್ಬದ ಒಳಗೆ ಸಂಬಳ ನೀಡುವ ಪ್ರಯತ್ನಿಸಲಾಗುವುದು ಎಂದರು.

ನಮ್ಮ ಇಲಾಖೆಯಲ್ಲಿ ಬಹಳಷ್ಟು ಯೋಜನೆಗಳಿಗೆ ಎರಡೂ ಸರ್ಕಾರದ ಅನುದಾನ ಬಳಕೆ ಆಗುತ್ತದೆ. ವಿಳಂಬ ಮೊದಲಿನಿಂದಲೂ ಆಗಿದೆ, ಇನ್ಮುಂದೆ ಈ ರೀತಿ ಆಗದ ಹಾಗೆ ನೋಡಿಕೊಳ್ಳಲಾಗುವುದು ಎಂದರು.

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ :
ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ತುಮಕೂರು: ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು.

ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಡಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದರು.

ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ, ಜಿಲ್ಲಾ ಹಾಗೂ ತಾಲ್ಲೂಕು ಶಿಶುಪಾಲನಾ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.

* *ವರ್ಕಿಂಗ್ ವುಮೆನ್ಸ್ ಹಾಸ್ಟೆಲ್*
ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸೂಕ್ತ ಜಾಗ ನೀಡಿದರೆ ನಗರದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸಲಾಗುವುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

*ರೀಲ್ಸ್ ಗೆ ಪ್ರೋತ್ಸಾಹಿಸಿ*
ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನ ಪ್ರತಿಯೊಬ್ಬರಿಗೂ ತಿಳಿಯಬೇಕು. ರೀಲ್ಸ್ ಮಾಡುವ ಮಹಿಳೆಯರಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಪ್ರೋತ್ಸಾಹ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

* *234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ*
ತುಮಕೂರು ಜಿಲ್ಲೆಯಲ್ಲಿ 234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲಾಗುವುದು. ತುಮಕೂರು ನಗರದಲ್ಲಿ ಸಿಎ ಸೈಟ್ ಸಿಕ್ಕರೆ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

*ಸಹಾಯವಾಣಿ ಕೇಂದ್ರಕ್ಕೆ ಸಚಿವರ ಕರೆ*
ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಸಹಾಯವಾಣಿ ಕೇಂದ್ರಕ್ಕೆ ಖುದ್ದು ಸಚಿವರೇ ಫೋನ್ ಮಾಡಿ ಮಾತನಾಡಿದರು. ಸಹಾಯವಾಣಿ ಸಿಬ್ಬಂದಿಯೊಂದಿಗೆ ಅಪರಿಚಿತರಂತೆ ಮಾತನಾಡಿದ ಸಚಿವರು, ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

*ಜಿಲ್ಲಾಡಳಿತದ ವತಿಯಿಂದ ಸಚಿವರಿಗೆ ಸನ್ಮಾನ*
ಸಭೆ ಬಳಿಕ ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತುಮಕೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಶಿರಾ ಕ್ಷೇತ್ರದ ಶಾಸಕರೂ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳೂ ಆಗಿರುವ ಟಿ.ಬಿ.ಜಯಚಂದ್ರ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕ ಸಿದ್ದೇಶ್ವರ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಮರಿಯಪ್ಪ, ವಿಕಲ ಚೇತನ ಇಲಾಖೆಯ ನಿರ್ದೇಶಕ ರಾಘವೇಂದ್ರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕಿ ಪುಷ್ಪಾ ರಾಯ್ಕರ್ ಸೇರಿದಂತೆ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?