Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜನ ಸೇವೆ ನಿರಂತರ: ಮಂಗಳವಾರವೂ ಮುಂದುವರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಳ್ಳಿ ಭೇಟಿ

ಬೆಳಗಾವಿ : ಸ್ವತಃ ಜನರ ಬಳಿಗೆ ಹೋಗಿ ಸಮಸ್ಯೆ ಆಲಿಸುವ ವಿನೂತನ ಕಾರ್ಯಕ್ರಮವನ್ನು ಮುಂದುವರಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಂಗಳವಾರ ಹಂಗರಗಾ, ಮಂಡೋಳಿ ಮೊದಲಾದ ಕಡೆ ಜನತಾ ದರ್ಶನ ನಡೆಸಿದರು.

ಹಂಗರಗಾ ಗ್ರಾಮದ ಶ್ರೀ ಬ್ರಹ್ಮಲಿಂಗ ದೇವಸ್ಥಾನದ ಆವರಣದಲ್ಲಿ ನವರಾತ್ರಿಯ ಪೂರ್ವಭಾವಿಯಾಗಿ ವಿಠ್ಠಲ ರುಕ್ಮೀಣಿ ಪಾರಾಯಣ ನಡೆಯುವ ಮುನ್ನ ನಡೆದ 'ಮುಹೂರ್ತ ಮೇಡ' ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನಂತರ ಸುಮಾರು ಒಂದು ಗಂಟೆಗಳಿಗೂ ಹೆಚ್ಚು ಸಮಯ ಜನಸ್ಪಂದನ ಕಾರ್ಯಕ್ರಮ ನಡೆಸಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ನೂರಾರು ಜನರು ತಮ್ಮ ವಿವಿಧ ಸಮಸ್ಯೆಗಳನ್ನು ಸಚಿವರ ಮುಂದೆ ಹೇಳಿಕೊಂಡು ಪರಿಹಾರ ಕಂಡುಕೊಂಡರು. ಬಹುತೇಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು.

ಕಾರ್ಯಕ್ರಮದಲ್ಲಿ ಯುವರಾಜ ಕದಂ, ಬಾಳು ಪಾಟೀಲ, ವಿಷ್ಣು ಸೋನಳಕರ್, ಜಾನುಭಾ ಬೆಳಗಾಂವ್ಕರ್, ನಿಲೇಶ್ ಬೆಳಗಾಂವ್ಕರ್, ಪಿಂಟು ಕಂಗ್ರಾಳಕರ್, ರಾಮಚಂದ್ರ ಹಲಕರ್ಣಿಕರ್, ಮಲ್ಲಪ್ಪ ಕಾಂಬಳೆ, ಉಮೇಶ್ ಸೋನಳಕರ್, ಶಿವಾಜಿ ಪಾಟೀಲ, ಮೀನಾ ಗೋಡ್ಸೆ, ನಿವೃತ್ತಿ ತಳವಾರ, ಯಲ್ಲಪ್ಪ ಪಾಟೀಲ, ವಿಶಾಲ ಚೌಹಾನ್, ಗೋಪಾಲ ಗೋಡ್ಸೆ, ಲಕ್ಷ್ಮೀ ಪಾಟೀಲ, ಕವಿತಾ ನಾಯಿಕ, ಮಲಪ್ರಭಾ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಮಂಡೊಳಿ ಗ್ರಾಮಕ್ಕೆ ಭೇಟಿ
ನಂತರ ಮಂಡೋಳಿ ಗ್ರಾಮಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಿರ್ಮಾಣ ಹಂತದಲ್ಲಿರುವ ಶ್ರೀ ಬ್ರಹ್ಮಲಿಂಗ, ಹನುಮಾನ ಹಾಗೂ ವಿಠ್ಠಲ ರುಕ್ಷ್ಮೀಣಿ ದೇವಸ್ಥಾನ ಕಟ್ಟಡದ ಪ್ರಗತಿ ಪರಿಶೀಲನೆ ನಡೆಸಿದರು.
2 ಕೋಟಿ ರೂ,ಗಳ ಅನುದಾನದಲ್ಲಿ ದೇವಸ್ಥಾನದ ಕಟ್ಟಡ ನಿರ್ಮಾಣಗೊಳ್ಳಲಿದ್ದು, ಮೊದಲನೇ ಕಂತಿನಲ್ಲಿ 65 ಲಕ್ಷ ಹಣ ಬಿಡುಗಡೆಗೊಳಿಸಲಾಗಿದೆ. ಎರಡನೇ ಕಂತಿನಲ್ಲಿ 50 ಲಕ್ಷ ಹಣ ಬಿಡುಗಡೆಗೊಳಿಸಲು ತಯಾರಿ ನಡೆಸಲಾಗಿದೆ. ಒಂದೇ ಕಟ್ಟಡದಲ್ಲಿ ಮೂರು ದೇವಸ್ಥಾನಗಳು ಇಲ್ಲಿ ತಲೆ ಎತ್ತಲಿದ್ದು, ಅತ್ಯಂತ ಸುಂದರವಾಗಿ ದೇವಾಲಯ ನಿರ್ಮಾಣವಾಗಲಿದೆ. ಕಟ್ಟಡ ನಿರ್ಮಾಣದಲ್ಲಿ ಯಾವುದೇ ಲೋಪದೋಷಗಳಾಗದಂತೆ ನಿಗಾವಹಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಇದಾದ ನಂತರ ಮಂಡೊಳಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಬಹಳ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಪರಿಹಾರ ಪಡೆದರು.
ಸಚಿವರು ಗ್ರಾಮಕ್ಕೇ ಆಗಮಿಸಿ ತಮ್ಮ ಸಮಸ್ಯೆಗಳನ್ನು ಆಲಿಸುತ್ತಿರುವುದಕ್ಕೆ ಗ್ರಾಮಸ್ಥರು ಖುಷಿಪಟ್ಟರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯ ವಡಗಾವಿಯಲ್ಲಿರುವ ಬೆಳಗಾವಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಶ್ರೀ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು