Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್-ಬಿಜೆಪಿ ನಾಯಕರಿಂದ ಸರ್ಕಾರದ ಮೇಲೆ ಸುಳ್ಳು ಆರೋಪ

ಬೆಳಗಾವಿ: ಹಾಲಿನ ದರ ಏರಿಕೆ ಮಾಡಿರುವುದರಿಂದ ರೈತರಿಗೆ ಅನುಕೂಲವಾಗಲಿದೆ. ಏರಿಕೆಯಾಗಿರುವ ನಾಲ್ಕು ರೂಪಾಯಿ ನೇರವಾಗಿ ರೈತರಿಗೆ ಸೇರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗಣೇಶಪುರ ಪೈಪ್‌‌ಲೈನ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಬೆಳಗಾವಿ ಜಿಲ್ಲೆಯ ನಿರ್ಮಿತಿ ಕೇಂದ್ರ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಕೆಎಂಎಫ್ ಈ ಹಣ ಇಟ್ಟುಕೊಳ್ಳುವುದಿಲ್ಲ ಎಂದರು.

ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಹಗರಣ ನಡೆದಿದೆ ಎನ್ನು ಆರೋಪದ ಕುರಿತು ಪ್ರತಿಕ್ರಿಯಿಸಿದ ಸಚಿವರು, ರಾಜ್ಯ ಬಿಜೆಪಿ ನಾಯಕರಿಗೆ ಬೇರೆ ಕೆಲಸವಿಲ್ಲ. ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದೇ ಕೆಲಸವಾಗಿದೆ. ಟೆಂಡರ್ ನಲ್ಲಿ ಯಾವುದೇ ಹಗರಣ ನಡೆದಿಲ್ಲ. ಉತ್ತರ ಪ್ರದೇಶ, ಮಧ್ಯ ಪ್ರದೇಶದಲ್ಲಿ ಟೆಂಡರ್ ಪಡೆದಿರುವ ಕಂಪನಿಗೆ ಇಲ್ಲೂ ಟೆಂಡರ್ ಸಿಕ್ಕಿದೆ. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲೇ ಉತ್ತರ ನೀಡಿದ್ದಾರೆ ಎಂದರು.

ಯತ್ನಾಳ್ ಅವರ ಹೊಸ ಪಕ್ಷಕ್ಕೆ ಶುಭವಾಗಲಿ:
ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್ ಅವರು ಹೇಳಿದಂತೆ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಯಾವುದೇ ಒಳ ಒಪ್ಪಂದವಿಲ್ಲ. ಅವರು (ಯತ್ನಾಳ್) ನಾಲಿಗೆಗೂ ಮೆದುಳಿಗೂ ಸಂಬಂಧವಿಲ್ಲದಂತೆ ಮಾತನಾಡುತ್ತಾರೆ. ಅವರು ಕಟ್ಟಲು‌ ಹೊರಟಿರುವ ಹೊಸ ಪಕ್ಷಕ್ಕೆ ಶುಭವಾಗಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾರೈಸಿದರು.

ಪೊಲೀಸರು ಕ್ರಮ ಕೈಗೊಳ್ಳುವರು:
ನಾನು ಜಿಲ್ಲಾ ಉಸ್ತುವಾರಿ ಸಚಿವೆಯಾದ ಬಳಿಕ ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವರು ಎಂದರು.

ಈ‌ ವೇಳೆ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ