Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರುನಾಡಲ್ಲಿಂದು ಮತ್ತೆ ಮೋದಿ ಗರ್ಜನೆ

ಬೆಂಗಳೂರು: ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರಗಳು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಚಾರ ನಡೆಸಲಿದ್ದಾರೆ.ರಾಜ್ಯದಲ್ಲಿ ಇದೇ 26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಅವರು ಮೈಸೂರಿನಲ್ಲಿ ಸಾರ್ವಜನಿಕ ಸಭೆ ಮತ್ತು ಮಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನ 3ಕ್ಕೆ, ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಮತ್ತು ಗ್ರಾಮಾಂತರ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಅರಮನೆ ಮೈದಾನದಲ್ಲಿ ಸಂಜೆ 5ಕ್ಕೆ ಸಾರ್ವಜನಿಕ ಸಭೆಗಳು ನಡೆಯಲಿವೆ.

ಬೆಂಗಳೂರು ಅರಮನೆ ಮೈದಾನದ ಕಾರ್ಯಕ್ರಮಕ್ಕೆ 60 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಎಲ್ಲ ಕಡೆಗಳಲ್ಲೂ ವಿಶಾಲವಾದ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ಕಾರ್ಯಕರ್ತರಲ್ಲದೇ ಮೋದಿ ಅಭಿಮಾನಿಗಳನ್ನೂ ಈ ಕಾರ್ಯಕ್ರಮದಲ್ಲಿ ಸೇರಿಸುವ ಪ್ರಯತ್ನ ಕಳೆದ ಕೆಲವು ದಿನಗಳಿಂದ ನಡೆದಿದೆ. ಮೋದಿ ಬೆಂಬಲಿಗರಾದ ಅನಿವಾಸಿ ಭಾರತೀಯರೂ ಈ ಸಭೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರದಿಂದ ಬರುವ ಕಾರ್ಯಕರ್ತರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. 15 ಸಾವಿರ ವಿಶೇಷ ಆಹ್ವಾನಿತರಿಗೆ ಪಾಸ್‌ ನೀಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ