Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಖ್ಯರಸ್ತೆಗಳ ವಿಸ್ತರಣೆ; ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ: ಸಂಸದ ಜಗದೀಶ ಶೆಟ್ಟರ

ಬೆಳಗಾವಿ: ಸಂಚಾರದಟ್ಟಣೆ ಗಮನದಲ್ಲಿ ಇಟ್ಟುಕೊಂಡು, ಜಿಲ್ಲೆಯ ನಾಲ್ಕು ಮುಖ್ಯ ರಸ್ತೆಗಳನ್ನು ಚತುಷ್ಪಥ ಅಥವಾ ಷಟ್ಟಥ ರಸ್ತೆಗಳಾಗಿ ವಿಸ್ತರಿಸುವ ಕುರಿತು ಪ್ರಸ್ತಾವ ಸಿದ್ಧಪಡಿಸಿ, ರಾಜ್ಯ ಸರ್ಕಾರಕ್ಕೆ ಕಳುಹಿಸಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಸೂಚಿಸಿದರು.

ಲೋಕೋಪಯೋಗಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

'ಸಂಕೇಶ್ವರದಿಂದ ಹುಕ್ಕೇರಿ, ಗೋಕಾಕ, ಯರಗಟ್ಟಿ, ಮುನವಳ್ಳಿ, ನರಗುಂದ ಮಾರ್ಗವಾಗಿ ರಾಮದುರ್ಗದವರೆಗಿನ ರಸ್ತೆ, ಗೋಕಾಕದಿಂದ ಯರಗಟ್ಟಿ, ಸವದತ್ತಿ ಮಾರ್ಗವಾಗಿ ಧಾರವಾಡದವರೆಗಿನ ರಸ್ತೆ, ಬೆಳಗಾವಿಯಿಂದ ಸಾವಂತವಾಡಿ ಮಾರ್ಗವಾಗಿ ಗೋವಾದ ಮಾಪುಸಾವರೆಗಿನ ರಸ್ತೆ, ರಬಕವಿಯಿಂದ ಗೋಕಾಕ, ಬೆಳಗಾವಿ ಮಾರ್ಗವಾಗಿ ಜಾಂಬೋಟಿವರೆಗಿನ ರಸ್ತೆ ವಿಸ್ತರಣೆ ಸಂಬಂಧ ಪ್ರಸ್ತಾವ ಸಿದ್ಧಪಡಿಸಿ, ಸರ್ಕಾರಕ್ಕೆ ಕಳುಹಿಸಿ' ಎಂದರು.

'ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಕೆಯಾದ ನಂತರ, ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿಯಾಗಿ ಅನುಮೋದನೆ ಪಡೆಯಲು ಪ್ರಯತ್ನಿಸುತ್ತೇನೆ' ಎಂದು ಹೇಳಿದರು.

ಜಿಲ್ಲೆಯಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿಗಳ ಸ್ಥಿತಿಗತಿ ಕುರಿತು ಚರ್ಚಿಸಿದರು.

ಲೋಕೋಪಯೋಗಿ ಇಲಾಖೆ ಬೆಳಗಾವಿ ವೃತ್ತದ ಅಧೀಕ್ಷಕ ಎಂಜಿನಿಯರ್ ಅರುಣ ಪಾಟೀಲ, ಬೆಳಗಾವಿ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಎಸ್.ಸೊಬರದ, ಚಿಕ್ಕೋಡಿ ಕಾರ್ಯನಿರ್ವಾಹಕ ಎಂಜಿನಿಯರ್ ಗಿರೀಶ ದೇಸಾಯಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ರಾಜೇಂದ್ರ ಪಾಟೀಲ ಇತರರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ