Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಂದೇ ಭಾರತ್ ಬಗ್ಗೆ ಮತ್ತೊಂದು ಪತ್ರ ಬರೆದು ಒತ್ತಡ ಹೇರಿದ ಸಂಸದ

ಬೆಳಗಾವಿ : ಮಹತ್ವದ ಬೇಡಿಕೆಯಾದ ಬೆಂಗಳೂರು -ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಮನವಿ ಮಾಡಿಕೊಂಡಿದ್ದಾರೆ.

ಪುಣೆ-ಬೆಳಗಾವಿ-ಹುಬ್ಬಳ್ಳಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಬೇಕು ಎಂಬ ನಮ್ಮ ಮನವಿಗೆ ಸ್ಪಂದಿಸಿ, ಬೆಳಗಾವಿ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಸೆಪ್ಟೆಂಬರ್ 16ರಂದು ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ಚಾಲನೆ ದೊರೆಯಲಿರುವುದು ಅತ್ಯಂತ ಸಂತಸದ ಸಂಗತಿ.

ಇದೀಗ ನಮ್ಮ ಕ್ಷೇತ್ರದ ಜನರ ಮತ್ತೊಂದು ಮಹತ್ವದ ಬೇಡಿಕೆಯಾದ ಬೆಂಗಳೂರು -ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿಯ ವರೆಗೆ ವಿಸ್ತರಿಸಲು ತಮ್ಮಲ್ಲಿ ವಿನಮ್ರ ಮನವಿ. ಈ ಹಿಂದೆ ಈ ರೈಲನ್ನು ಬೆಳಗಾವಿಯ ವರೆಗೆ ಟ್ರಯಲ್ ರನ್ ಮಾಡಿದಾಗ ಅದು ಯಶಸ್ವಿಯಾಗಿತ್ತು. ತಾಂತ್ರಿಕ ಕಾರಣಗಳನ್ನು ನೀಡಿದ ರೈಲ್ವೆ ಅಧಿಕಾರಿಗಳು ಹೊಸ ವೇಳಾಪಟ್ಟಿಯನ್ನು ಆರಂಭಿಸುವ ಪ್ರಕ್ರಿಯೆಯನ್ನು ನಿಲ್ಲಿಸಿದ್ದಾರೆ. ಈ ಎಲ್ಲ ಮಾಹಿತಿಗಳನ್ನು ನಾನು ಈಗಾಗಲೇ ನಿಮ್ಮೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಸಂದರ್ಭದಲ್ಲಿ ತಿಳಿಸಿದ್ದೇನೆ.

ಕ್ಷೇತ್ರದ ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಸೇವೆಗಳನ್ನು ಬೆಳಗಾವಿ (ಕರ್ನಾಟಕ) ವರೆಗೆ ವಿಸ್ತರಿಸಲು ತಾವು ಮನವಿಯನ್ನು ಪರಿಶೀಲಿಸುವಂತೆ ನಾನು ಮತ್ತೊಮ್ಮೆ ವಿನಂತಿಸುತ್ತೇನೆ. ಎಂದು ಪತ್ರದ ಮೂಲಕ ಅವರು ಮನವಿ ಮಾಡಿಕೊಂಡಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?