Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಡಾ ನಿವೇಶನ ಹಂಚಿಕೆ ಪ್ರಕರಣ-ಸಿದ್ದರಾಮಯ್ಯ ದೋಷಮುಕ್ತ: 'ಬಿ' ಅಂತಿಮ ವರದಿ

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆಪಾದಿಸಲಾಗಿದ್ದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಪರಾಧ ಸಾಬೀತುಪಡಿಸುವ ಯಾವುದೇ ಅಂಶಗಳಿಲ್ಲ' ಎಂಬ ಷರಾ ಬರೆದಿರುವ 'ಬಿ' ಅಂತಿಮ ವರದಿಯನ್ನು ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಸ್ನೇಹಮಯಿ ಕೃಷ್ಣ ನೀಡಿದ್ದ ಖಾಸಗಿ ದೂರನ್ನು ಆಧರಿಸಿ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಈ 'ಬಿ' ಅಂತಿಮ ವರದಿಯನ್ನು ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ವಿವಾದಿತ ಜಮೀನಿನ ಮೂಲ ಮಾಲೀಕ ದೇವರಾಜು ಅವರಿಗೆ ನಿರ್ದಿಷ್ಟ ಆರೋಪಗಳಿಂದ ಮುಕ್ತಿ ನೀಡಲಾಗಿದೆ.

ಆರೋಪಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಿ ಸಿದ್ಧಪಡಿಸಲಾಗಿರುವ ಒಟ್ಟು 27 ಸಂಪುಟಗಳ ವರದಿಯು ಎಲ್ಲ ದಸ್ತಾವೇಜುಗಳೂ ಸೇರಿದಂತೆ ಒಟ್ಟು 11 ಸಾವಿರ ಪುಟಗಳನ್ನು ಒಳಗೊಂಡಿದೆ. ಈ ಕಂತೆಯನ್ನು ತನಿಖಾಧಿಕಾರಿ ಹಾಗೂ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರಿಗೆ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ವಿವಾದಿತ ಜಮೀನಿನ ಮೂಲ ಮಾಲೀಕ ದೇವರಾಜು ಅವರಿಗೆ ನಿರ್ದಿಷ್ಟ ಆರೋಪಗಳಿಂದ ಮುಕ್ತಿ ನೀಡಲಾಗಿದೆ.

ಆರೋಪಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಿ ಸಿದ್ಧಪಡಿಸಲಾಗಿರುವ ಒಟ್ಟು 27 ಸಂಪುಟಗಳ ವರದಿಯು ಎಲ್ಲ ದಸ್ತಾವೇಜುಗಳೂ ಸೇರಿದಂತೆ ಒಟ್ಟು 11 ಸಾವಿರ ಪುಟಗಳನ್ನು ಒಳಗೊಂಡಿದೆ. ಈ ಕಂತೆಯನ್ನು ತನಿಖಾಧಿಕಾರಿ ಹಾಗೂ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ ಅವರು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರಿಗೆ ಸಲ್ಲಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ