Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಟನ್, ಚಿಕನ್ ಅಂಗಡಿಗೆ ಶೋಭಾ ಕರಂದ್ಲಾಜೆ ಹೆಸರು

ಕುಕನೂರು: ಕೊಪ್ಪಳ ಜಿಲ್ಲೆ ಕುಕನೂರಿನ ಯುವಕ ಖಾದೀರ್‌ ಕಲಾಲ ಎಂಬುವರು ಹೊಸದಾಗಿ ಆರಂಭಿಸಿರುವ ಮಟನ್ ಮತ್ತು ಚಿಕನ್ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರಿಟ್ಟಿದ್ದಾರೆ. ಶೋಭಾ ಕರಂದ್ಲಾಜೆ ಮಟನ್ ಅಂಡ್ ಚಿಕನ್ ಸೆಂಟರ್ ಹೆಸರಿನ ಈ ಅಂಗಡಿ ಈಗ ಭಾರೀ ವೈರಲ್ ಆಗಿದೆ. ಶೋಭಾ ಅಭಿಮಾನಿಯಾಗಿರುವ ಈ ಯುವಕ ಕರಂದ್ಲಾಜೆಯವರ ಭಾವಚಿತ್ರದ ಟ್ಯಾಟೋವನ್ನು ಕೂಡ ಕೈಗೆ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾರೆ.

ಖಾದಿರ್ ಬಾಬಣ್ಣ ಕಲಾಲ್ ಅವರು 20 ವರ್ಷಗಳಿಂದ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿ. 2018 ರಲ್ಲಿ ಶೋಭಾ ಕರಂದ್ಲಾಜೆ ಅವರು ಪಟ್ಟಣಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಾಗ ಅವರ ರಾಜಕೀಯ ಮಾತು ಕೇಳಿ ಅಪ್ಪಟ ಅಭಿಮಾನಿಯಾಗಿ ಬದಲಾಗಿದ್ದಾರೆ. ಖಾದಿರ್ ಕಲಾಲ್ ಐದು ವರ್ಷಗಳ ಹಿಂದೆ ಶೋಭಾ ಕರಂದ್ಲಾಜೆ ಅವರ ಫೋಟೋವನ್ನು ಕೈ ಮೇಲೆ ಟ್ಯಾಟೋ ಹಾಕಿಸಿಕೊಂಡಿದ್ದಾರೆ. ಈಗ ಹೊಸದಾಗಿ ಪ್ರಾರಂಭಿಸಿರುವ ಅಂಗಡಿಗೆ ಶೋಭಾ ಕರಂದ್ಲಾಜೆ ಮಟನ್ ಮತ್ತು ಚಿಕನ್ ಸೆಂಟರ್ ಹೆಸರನ್ನು ಇಟ್ಟಿರುವ ನಾಮಫಲಕ ಈಗ ಎಲ್ಲೆಡೆ ವೈರಲ್ ಆಗಿದೆ. ನಾನು ಕಳೆದ 20 ವರ್ಷಗಳಿಂದ ಶೋಭಾ ಕರಂದ್ಲಾಜೆ ಮೇಡಂ ಅವರ ಅಭಿಮಾನಿಯಾಗಿದ್ದೇನೆ. ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಮನೆಯಲ್ಲಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತು. ಅವರ ಅಭಿಮಾನಿಯಾಗಿ ಈಗ ನನ್ನ ಅಂಗಡಿಗೆ ಅವರ ಹೆಸರನ್ನು ನಾಮಕರಣ ಮಾಡಿರುವೆ ಎಂದು ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ