Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೋಕಸಭಾ ಚುನಾವಣೆ ಫಲಿತಾಂಶದ ಅಚ್ಚರಿ ಭವಿಷ್ಯ ನುಡಿದ ಮೈಸೂರು ಶ್ವಾನ !

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕೇವಲ ಎರಡೇ ದಿನ ಬಾಕಿ ಇದೆ. ಈಗಾಗಲೇ ಎಕ್ಸಿಟ್​ಪೋಲ್ ಹೊರಬಿದ್ದಿದ್ದು ಬಹುತೇಕ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸಲಿದೆ ಎಂಬ ಸರ್ವೆ ಬಂದಿದೆ. ಇದರ ಜೊತೆಗೆ ಮೈಸೂರಿನ ಶ್ವಾನವೊಂದು ಫಲಿತಾಂಶದ ಭವಿಷ್ಯ ನುಡಿದಿದೆ. ಮೈಸೂರಿನ ಕೆ.ಟಿ. ಸ್ಟ್ರೀಟ್‌ನ ಕಾಲಭೈರವೇಶ್ವರ ದೇಗುಲದಲ್ಲಿ ಭೈರವ ಎಂಬ 2 ವರ್ಷದ ಶ್ವಾನ ಈ ಬಾರಿ ನರೇಂದ್ರ ಮೋದಿಯವರು ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದೆ.

ಗೋಪಿನಾಥ್ ಎಂಬುವವರು ಸಾಕಿರುವ ಭೈರವ ಶ್ವಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರವಿಟ್ಟಾಗ ಶ್ವಾನ ಮೋದಿಯವರ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಫಲಿತಾಂಶದ ಭವಿಷ್ಯ ನುಡಿದಿದೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿರುವ ಎಂ ಲಕ್ಷ್ಮಣ್ ಹಾಗೂ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಚಿತ್ರ ತೋರಿಸಿದಾಗ ಶ್ವಾನ ಯದುವೀರ್ ಭಾವಚಿತ್ರ ಆಯ್ಕೆ ಮಾಡಿದೆ. ಈ ಎರಡು ವಿಡಿಯೋಗಳು ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿವೆ.

ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಕೇಸರಿ ಪಡೆಯದ್ದೇ ಪಾರುಪತ್ಯ. ಬಿಜೆಪಿಯ ಸಾರಥಿಯಾಗಿ ಎರಡು ಅವಧಿಯಲ್ಲೂ ಪಾಂಚಜನ್ಯ ಮೊಳಗಿಸಿರುವ ಮೋದಿಗೆ ಈ ಬಾರಿಯೂ ಅದೃಷ್ಟ ಖುಲಾಯಿಸುವ ಮುನ್ಸೂಚನೆ ಸಿಕ್ಕಿದೆ. ಅಬ್‌ ಕೀ ಬಾರ್, ಚಾರ್‌ ಸೋ ಪಾರ್ ಎಂದಿದ್ದ ಬಿಜೆಪಿ ತನ್ನ ಗುರಿ ಮುಟ್ಟಲ್ಲ ಅಂತಾ ಕೆಲ ಸಮೀಕ್ಷೆಗಳು ಹೇಳ್ತಿದ್ರೆ, ಔರ್​ ಏಕ್ ಬಾರ್ ಮೋದಿ ಸರ್ಕಾರ್ ಅಂತಾ ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿತಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ