Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ತ್ಯಜಿಸಿ ಕೈ ಸೇರ್ತಾರೆ ನಂಜುಂಡಿ

ಬೆಂಗಳೂರು : ಹಾಲಿ ವಿಧಾನಸಭಾ ಪರಿಷತ್ ಸದಸ್ಯ ಇದೀಗ ತಮ್ಮ ಪರಿಷತ್ ಅವಧಿ ಮುಗಿಯುತ್ತಿದ್ದಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ವಿಶ್ವಕರ್ಮ ಸೇರಿದಂತೆ ಹಿಂದುಳಿದ ಸಮು ದಾಯಗಳಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ನಿರ್ಧಾರ ಮಾಡಿದ್ದು, ಬುಧವಾರ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಲಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆ.ಪಿ. ನಂಜುಂಡಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಬಿಜೆಪಿಯಿಂದ ವಿಶ್ವಕರ್ಮ ಸಮುದಾಯಕ್ಕೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ವೇಳೆ ಪ್ರಾತಿನಿಧ್ಯ ನೀಡಿಲ್ಲ. ಜತೆಗೆ ಹಿಂದುಳಿದ ವರ್ಗಗಳನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೇ ವೇಳೆ ಶಿವಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಗೆ ಆಹ್ವಾನಿಸಿದ್ದರು ಎನ್ನಲಾಗಿದೆ.

ಇದಕ್ಕೆಒಪ್ಪಿದ್ದ ನಂಜುಂಡಿ ಸೋಮವಾರ ಡಿ.ಕೆ. ಶಿವಕುಮಾರ್ ಅವರು ಕೆ.ಪಿ. ನಂಜುಂಡಿ ಅವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರಕ್ಕೆ ತೆರಳಿ ಖರ್ಗೆ ಅವರೊಂದಿಗೆ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದರು. ಈ ವೇಳೆ ಪಕ್ಷ ಸೇರ್ಪಡೆಗೆ ಅನುಮತಿ ದೊರೆತಿದ್ದು, ಬುಧವಾರ ಸೇರ್ಪಡೆಗೊಳ್ಳಲಿದ್ದಾರೆ.

ವಿಧಾನಸಭೆಯಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಚುನಾಯಿತರಾಗಿರುವ ಕೆ.ಪಿ. ನಂಜುಂಡಿ ಅವರ ಪರಿಷತ್ ಸದಸ್ಯತ್ವ ಅವಧಿ ಜೂನ್ 17ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ನಂತರ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?