Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ತ್ರೀಯ ಗ್ರಂಥಪಾಲಕರ ದಿನಾಚರಣೆ

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಮಂಗಳವಾರ "ರಾಷ್ಟ್ರೀಯ ಗ್ರಂಥಪಾಲಕರ ದಿನ"ಆಚರಿಸಲಾಯಿತು.

ಗ್ರಂಥಪಾಲಕ ಎಸ್ .ಎಸ್. ಸೀಮಿಮಠ ಅವರು ಡಾ.ಎಸ್. ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು ಮತ್ತು ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಗ್ರಂಥಾಲಯ ವಿಜ್ಞಾನವನ್ನು ಭಾರತದಾದ್ಯಂತ ಬೆಳೆಸುವಲ್ಲಿ, ಪ್ರಚಾರ ಮಾಡುವಲ್ಲಿ ಅವರೇ ಮೊದಲಿಗರು. ದೇಶದಲ್ಲಿ ಡಾ.ಎಸ್‌.ಆರ್‌.ರಂಗನಾಥನ್‌ರಷ್ಟು ಗ್ರಂಥಾಲಯದಲ್ಲಿ ಕೃಷಿ ಮಾಡಿದವರು ಮತ್ತೊಬ್ಬರಿಲ್ಲ. ಆದುದರಿಂದ ಅವರನ್ನು ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಕರೆಯಲಾಗಿದೆ ಎಂದು ತಿಳಿಸಿದರು.

ಪ್ರಕಾಶ ಇಚಲಕರಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಂಥಪಾಲಕರ ದಿನಾಚರಣೆಯ ಮಹತ್ವ ಮತ್ತು ಆಚರಿಸುವ ಉದ್ದೇಶವನ್ನು ತಿಳಿಸಿದರು. ಅಧೀಕ್ಷಕರಾದ ಎ ಎ ಕಾಂಬಳೆ, ಆನಂದ ಮುತ್ತಗಿ, ಸುನಿಲ್, ಪದ್ಮಪ್ರಿಯಾ, ಐಹೊಳೆ, ಸಂಗೀತಾ, ಲತಾ ಎಂ, ವಿಜಯಲಕ್ಷ್ಮಿ, ಲಕ್ಷ್ಮಿ, ಪೂರ್ಣಿಮಾ, ಸರಸ್ವತಿ ಮತ್ತು ನಗರ ಜಿಲ್ಲಾ ಕೇಂದ್ರ ಗ್ರಂಥಾಲಯದ ಎಲ್ಲಾ ಸಿಬ್ಬಂದಿ,ಮತ್ತು ಗ್ರಂಥಾಲಯದ ಸಾರ್ವಜನಿಕ ಓದುಗರು,ವಿದ್ಯಾರ್ಥಿಗಳು ಹಾಜರಿದ್ದರು.

ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನವನ್ನು ಈ ದಿನ ಆಚರಿಸಲಾಗುತ್ತದೆ.ರಾಷ್ಟ್ರೀಯ ಗ್ರಂಥಪಾಲಕರ ದಿನದಂದು, ಗ್ರಂಥಪಾಲಕರ ಸೇವೆಯನ್ನು ಗುರುತಿಸಿ ಗೌರವಿಸಲಾಗುತ್ತದೆ.ಈ ದಿನದಂದು, ಅನೇಕ ಗ್ರಂಥಾಲಯಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಗ್ರಂಥಾಲಯಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು