Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಕ್ಸಲ್ ಮುಖಂಡ ವಿಕ್ರಂಗೌಡ ಎನ್‌ಕೌಂಟರ್

ಬೆಂಗಳೂರು : ನಕ್ಸಲ್ ಮುಖಂಡ ವಿಕ್ರಂಗೌಡನನ್ನು ಎನ್‌ಕೌಂಟ‌ರ್ ಮಾಡಲಾಗಿದೆ. ಕಳೆದ ಕೆಲದಿನಗಳಿಂದ ಹೆಬ್ರಿ, ಶೃಂಗೇರಿ ಭಾಗದಲ್ಲಿ ನಕ್ಸಲ್ ಚಲನವಲನದ ಬಗ್ಗೆ ಎಎನ್‌ಎಫ್‌ಗೆ ಮಾಹಿತಿ ಲಭ್ಯವಾಗಿತ್ತು. ANF ತಂಡ ನಿನ್ನೆ ನಡೆಸಿದ್ದ ಕೂಂಬಿಂಗ್ ವೇಳೆ ವಿಕ್ರಂಗೌಡ ನೇತೃತ್ವದ ನಕ್ಸಲ್ ತಂಡ ಮುಖಾಮುಖಿಯಾದ ವೇಳೆ ಶೂಟೌಟ್‌ನಲ್ಲಿ ಎನ್‌ಕೌಂಟ‌ರ್ ಆಗಿದ್ದಾನೆ. ಹೆಬ್ರಿ ವ್ಯಾಪ್ತಿಯಲ್ಲಿ ಸೀತಂ ಬೈಲ್ ಎಂಬಲ್ಲಿ ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

 

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಮತ್ತು ಆತನ ಜೊತೆಗಿದ್ದ ಆರು ಮಂದಿ ಪೊಲೀಸರಿಗೆ ಶರಣಾಗಿ ಸಮಾಜದ ಮುಖ್ಯ ವಾಹಿನಿಗೆ ಬರಲಿದ್ದಾರೆಂಬ ವದಂತಿ ಹರಡಿತ್ತು. ಕೇಂದ್ರ ಸರ್ಕಾರದ ಸೂಚನೆಯಂತೆ ಕೇರಳ, ಛತ್ತೀಸ್ಗಢ, ಆಂಧ್ರದಲ್ಲಿ ನಕ್ಸಲ್‌ ವಿರೋಧಿ ಕಾರ್ಯಾಚರಣೆ ತೀವ್ರಗೊಂಡಿದ್ದು ಮತ್ತು ಕಾಡಿನಂಚಿನ ಗ್ರಾಮಗಳಲ್ಲೂ ಬೆಂಬಲ ಸಿಗದೇ ಇದ್ದುದು ಇವರಿಗೆ ಅಳಿವು ಉಳಿವಿನ ಪ್ರಶ್ನೆಯಾಗಿತ್ತು. ಇತ್ತೀಚೆಗೆ ಇದು, ಅದಕ್ಕೂ ಮೊದಲು ಸುಬ್ರಹ್ಮಣ್ಯ ಬಳಿಯ ಕೂಜಿಮಲೆ ಬಳಿ ನಕ್ಸಲರು ಕಾಣಿಸಿಕೊಂಡಿದ್ದರು. ಆದರೆ ಎಎನ್‌ಎಫ್ ಕೂಂಬಿಂಗ್ ನಡೆಸಿದರೂ ಅವರ ಕಣ್ಣಿಗೆ ಬಿದ್ದಿರಲಿಲ್ಲ.

ವಿಕ್ರಂ ಗೌಡ ಕಳೆದ 10 ವರ್ಷಗಳಲ್ಲಿ ಪಶ್ಚಿಮ ಘಟ್ಟದ ನಕ್ಸಲರಿಗೆ ಮುಖಂಡನಾಗಿದ್ದ. 2012 ರಲ್ಲಿ ಕರ್ನಾಟಕ ಭಾಗದಲ್ಲಿ ನಕ್ಸಲ್ ಕಾರ್ಯಾಚರಣೆ ತೀವ್ರಗೊಂಡ ಬಳಿಕ ಕೇರಳದತ್ತ ಪರಾರಿಯಾಗಿದ್ದರು. ಕಳೆದ ವರ್ಷ ವಯನಾಡು ಸೇರಿದಂತೆ ಕೇರಳದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಲಾಗಿತ್ತು. ಆನಂತರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ನಕ್ಸಲರು ಕಾಣಿಸಿದ್ದರು.

ಕಬ್ಬಿನಾಲೆ ಗ್ರಾಮದ ಸೀತಂಬೈಲು ಎಂಬಲ್ಲಿ ಸೋಮವಾರ ರಾತ್ರಿ ನಕ್ಸಲ್ ಕೂಂಬಿಂಗ್ ಕಾರ್ಯಾಚರಣೆ ನಡೆದಿತ್ತು. ಈ ವೇಳೆ, ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಎಂಟರ್ ಆಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಒಂಟಿ ಮನೆಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೂ ನಕ್ಸಲರು ಭೇಟಿ ನೀಡಿ, ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ನಕ್ಸಲ್ ವಿರೋಧಿ ಕೂಂಬಿಂಗ್ ಕಾರ್ಯ ಚುರುಕುಗೊಳಿಸಲಾಗಿತ್ತು. ನಿನ್ನೆ ರಾತ್ರಿ ಕಬ್ಬಿನಾಲೆ ಗ್ರಾಮಕ್ಕೆ ದಿನಸಿ ಸಾಮಗ್ರಿ ಪಡೆಯಲು ಐವರಿದ್ದ ನಕ್ಸಲರು ಎಂಟ್ರಿ ಕೊಟ್ಟಿದ್ದರು ಎನ್ನಲಾಗಿದೆ. ಇದೇ ವೇಳೆ, ಗುಂಡಿನ ಚಕಮಕಿ ನಡೆದಿದ್ದು ವಿಕ್ರಂ ಗೌಡ ಬಲಿಯಾಗಿದ್ದರೆ ಇತರ ನಾಲ್ವರು ಪರಾರಿಯಾಗಿದ್ದಾರೆ.

ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ ಕೌಂಟರ್‌ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ.

ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು. ಕಸ್ತೂರಿ ರಂಗನ್ ವರದಿ ಜಾರಿಗೊಂಡರೆ ಕಾಡಂಚಿನ ಗ್ರಾಮಗಳ ಜನತೆಯ ಜೀವನ ದುಸ್ತರವಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಮತ್ತೆ ನೆಲೆ ಕಂಡುಕೊಳ್ಳಲು ನಕ್ಸಲರು ಹಲವು ವರ್ಷಗಳ ನಂತರ ಮತ್ತೆ ತಮ್ಮ ಎಂದಿನ ಚಟುವಟಿಕೆ ಆರಂಭಿಸಿದ್ದರು. ಇದರಿಂದ ಎಚ್ಚೆತ್ತಿರುವ ಪೊಲೀಸರು ಕೊನೆಗೂ ಪ್ರಮುಖ ನಕ್ಸಲ್ ನಾಯಕನನ್ನು ಎನ್ಕೌಂಟರ್ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ