Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯ ಮಾನವ ಹಕ್ಕು ಆಯೋಗದ ನೂತನ ಅಧ್ಯಕ್ಷರು, ಸದಸ್ಯರ ನೇಮಕ

 

ಬೆಂಗಳೂರು :
ಹಿಮಾಚಲ ಪ್ರದೇಶ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್‌.ಕೆ. ವಂಟಿಗೋಡಿ ಮತ್ತು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಟಿ. ಶ್ಯಾಂ ಭಟ್‌ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ.
ಮೂವರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಲಾಗಿದೆ. ಐದು ವರ್ಷ ಅಥವಾ ಅಧ್ಯಕ್ಷರು ಹಾಗೂ ಸದಸ್ಯರಿಗೆ 70 ವರ್ಷ ವಯಸ್ಸಾಗುವವರೆಗೆ ಈ ಎರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅಧಿಕಾರವಧಿ ಹೊಂದಿರುತ್ತಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಎಲ್‌. ನಾರಾಯಣಸ್ವಾಮಿ ಕಾನೂನು ಪದವಿ ಪೂರ್ಣಗೊಳಿಸಿ 1987ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 2007 ರ ಜುಲೈ 4 ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2009 ರ ಏಪ್ರಿಲ್‌ 17ರಿಂದ ಕಾಯಂ ನ್ಯಾಯಮೂರ್ತಿಯಾಗಿದ್ದರು. 2019ರ ಆಗಸ್ಟ್‌ನಲ್ಲಿ ಹಿಮಾಚಲಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಅವರು, 2021ರ ಜುಲೈ 30ರಂದು ನಿವೃತ್ತರಾಗಿದ್ದರು.

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳು ಕೆಲವು ತಿಂಗಳುಗಳಿಂದ ಖಾಲಿ ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಯ್ಕೆ ಸಮಿತಿ ಇತ್ತೀಚೆಗೆ ಸಭೆ ನಡೆಸಿ, ಮೂವರನ್ನು ಆಯೋಗದ ಅಧ್ಯಕ್ಷ, ಸದಸ್ಯರ ಹುದ್ದೆಗಳಿಗೆ ನೇಮಿಸುವ ತೀರ್ಮಾನ ಕೈಗೊಂಡಿತ್ತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?