ಬೆಳಗಾವಿ, ನವೆಂಬರ್ 06: ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ ಹಿನ್ನೆಲೆ ಬೆಳಗಾವಿ ಹೊರವಲಯದ ಮುಕ್ತಿ ಮಠದ ಬಳಿ ರೈತರ ಪಾದಯಾತ್ರೆಗೆ ಪೊಲೀಸರು ತಡೆಯೊಡ್ಡಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ಸೇರಿ ಧರಣಿನಿರತ 200ಕ್ಕೂ ಅಧಿಕ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ, ತಳ್ಳಾಟ ನಡೆದಿದೆ. ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಚೂನಪ್ಪ ಪೂಜಾರಿ ಕಿಡಿ ಕಾರಿದ್ದು, ರಾಜ್ಯಾದ್ಯಂತ ಬಂದ್ಗೆ ಕರೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.