Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

SSLC ಫಲಿತಾಂಶದ ಬೆನ್ನಿಗೆ ಮುಂದಿನ ಪರೀಕ್ಷೆ ದಿನಾಂಕವು ಘೋಷಣೆ

ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾದ ಬೆನ್ನಲ್ಲೇ, ವಿದ್ಯಾರ್ಥಿಗಳಿಗೆ ಮಹತ್ವದ ಮುಂದಿನ ಹಂತದ ಪ್ರಕ್ರಿಯೆಗಳ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಫಲಿತಾಂಶದ ನಂತರದ ಕ್ರಮಗಳನ್ನು ಪಾರದರ್ಶಕವಾಗಿ ಹಾಗೂ ವಿದ್ಯಾರ್ಥಿ ಸ್ನೇಹಿಯಾಗಿ ರೂಪಿಸಿರುವುದಾಗಿ ಇಲಾಖೆ ತಿಳಿಸಿದೆ.

ಸ್ಕ್ಯಾನ್ ಪ್ರತಿಗೆ ಅರ್ಜಿ – ಏಪ್ರಿಲ್ 23ರಿಂದ ಆರಂಭ : ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಏಪ್ರಿಲ್ 23ರಿಂದ 26ರವರೆಗೆ ಅರ್ಜಿ ಸಲ್ಲಿಸಬಹುದು. ಅಂಕಗಳ ಕುರಿತು ಸ್ಪಷ್ಟತೆ ಪಡೆಯಲು ಹಾಗೂ ಮೌಲ್ಯಮಾಪನದ ಬಗ್ಗೆ ಅರಿವು ಪಡೆಯಲು ಈ ಅವಕಾಶ ನೆರವಾಗಲಿದೆ.

ಮರುಮೌಲ್ಯಮಾಪನಕ್ಕೆ ಅವಕಾಶ : ಸ್ಕ್ಯಾನ್ ಪ್ರತಿಯನ್ನು ಪಡೆದ ವಿದ್ಯಾರ್ಥಿಗಳು ಮಾತ್ರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಪ್ರಕ್ರಿಯೆ ಏಪ್ರಿಲ್ 28ರಿಂದ ಮೇ 04ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳ ಪ್ರತಿಯೊಂದು ಅಂಕಕ್ಕೂ ಮೌಲ್ಯ ನೀಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 – ಶುಲ್ಕ ವಿನಾಯಿತಿ: ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು, ಗೈರುಹಾಜರಾದವರು ಅಥವಾ ಫಲಿತಾಂಶ ಸುಧಾರಿಸಿಕೊಳ್ಳಲು ಬಯಸುವವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಅವಕಾಶ ನೀಡಲಾಗಿದೆ. ಮೇ 18ರಿಂದ 25ರವರೆಗೆ ಈ ಪರೀಕ್ಷೆ ನಡೆಯಲಿದೆ. ಈ ಬಾರಿ ವಿಶೇಷವಾಗಿ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷಾ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮೂರನೇ ಪರೀಕ್ಷೆ ಇಲ್ಲ : ಈ ಬಾರಿ ಫಲಿತಾಂಶ ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಬಂದಿರುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳಿಗೆ ಸೂಚನೆ : ಹೆಚ್ಚಿನ ಮಾಹಿತಿಗಾಗಿ ತಮ್ಮ ತಮ್ಮ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ