Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೊಮ್ಮೆ ವಿಧಾನ ಪರಿಷತ್‌ ಸ್ಥಾನಕ್ಕೆ ಬಿಜೆಪಿಯ ಸಿ.ಪಿ.ಯೋಗೇಶ್ವರ ರಾಜೀನಾಮೆ

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ ಅವರು ಸೋಮವಾರ ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು, ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ಅವರು, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರವನ್ನು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚುನಾವಣೆಗೆ ಸ್ಪರ್ಧಿಸಬೇಕಾದರೆ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಆದ್ದರಿಂದ ರಾಜೀನಾಮೆ ನೀಡಿದ್ದೇನೆ. ನಾನು ಯಾವುದೇ ಪಕ್ಷ ಸೇರುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.
ಸಿ.ಪಿ. ಯೋಗೇಶ್ವರ ವಿಧಾನ ಪರಿಷತ್​ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು, ಈ ಬಾರಿ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡದಿರಲು ನಿರ್ಧರಿಸಿದೆ. ಅಲ್ಲದೇ ಹೈಕಮಾಂಡ್​ ಸಹ ಜೆಡಿಎಸ್​ ಕ್ಷೇತ್ರವಾಗಿದ್ದರಿಂದ ಅವರಿಗೆ ಬಿಟ್ಟುಕೊಟ್ಟಿದೆ. ಟಿಕೆಟ್‌ ಆಕಾಂಕ್ಷಿಯಾಗಿದ್ದ ಯೋಗೇಶ್ವರ ಬಿಜೆಪಿಯ ಪರಿಷತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ