Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕ್ರೀಡೆಯಲ್ಲಿ ಭಾಗವಹಿಸಿ ಮಾನಸಿಕ ಹಾಗೂ ದೈಹಿಕ ಸದೃಢಗೊಳ್ಳಬೇಕು

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಅಂತರ್ ಮಹಾವಿದ್ಯಾಲಯಗಳ ಟೆಕ್ವಾಂಡೊ ಪಂದ್ಯಾವಳಿ ಆಯ್ಕೆ ಪ್ರಕ್ರಿಯೆ 2025-26ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಬೆಳಗಾವಿಯ ಕ್ರೀಡಾ ಹಾಗೂ ಯುವ ಸಬಲೀಕರಣ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಉದ್ಘಾಟಕರಾಗಿ ಬೆಳಗಾವಿಯ ಕ್ರೀಡಾ ಹಾಗೂ ಯುವ ಸಬಲೀಕರಣ ಇಲಾಖೆಯ ವಾಲಿಬಾಲ್ ತರಬೇತಿದಾರ ಬಸವರಾಜ ಹೊಸಮಠ ಮಾತನಾಡಿ, ನಮ್ಮ ದೇಶವು ಕ್ರೀಡಾಕ್ಷೇತ್ರದಲ್ಲಿ ಬೆಳೆಯಬೇಕು. ನಮ್ಮ ಕ್ರೀಡಾಪಟುಗಳು ಕ್ರೀಡೆಯಲ್ಲಿ ಭಾಗವಹಿಸಿ ಮಾನಸಿಕ ಹಾಗೂ ದೈಹಿಕ ಸದೃಢ ಗೊಳ್ಳಬೇಕೆಂದರು .

ಅಧ್ಯಕ್ಷತೆಯನ್ನು ವಹಿಸಿದ್ದ ರಾಜಾ ಲಖಮಗೌಡ ವಿಜ್ಞಾನ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಜೆ.ಎಸ್. ಕವಳೇಕರ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕೆಂದು ಹೇಳಿದರು.
ಟೆಕ್ವಾಂಡೊ ಹಾಕಿ ಸಮಿತಿ ಸದಸ್ಯರಾಗಿ ಶ್ರೀಪಾದ್ ರಾವ್ ಅಂತರಾಷ್ಟ್ರೀಯ ತರಬೇತಿದಾರ ಪ್ರಭಾಕರ ಶೇಡಬಾಳ ಮತ್ತು ಡಾ. ಬಸವರಾಜ ಮುತ್ನಾಳ ಉಪಸ್ಥಿತರಿದ್ದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಧೀನ ಕಾಲೇಜುಗಳ ಕ್ರೀಡಾಪಟುಗಳು ಹಾಗೂ ಸಂಯೋಜಕರು ಭಾಗವಹಿಸಿದ್ದರು.
ಕಾಲೇಜಿನ ದೈಹಿಕ ನಿರ್ದೇಶಕ ಡಾ. ಶಿವಾನಂದ ಬುಲಬುಲಿ ಸ್ವಾಗತಿಸಿದರು. ಕಾಲೇಜಿನ ಕ್ರೀಡಾ ವಿಭಾಗದ ಉಪಾಧ್ಯಕ್ಷ ಪ್ರೊ ವಿ. ಕೆ.ಗಾಣಿಗೇರ ಪರಿಚಯಿಸಿದರು. ಡಾ. ಮಹೇಶ ಬುರಡ ವಂದಿಸಿದರು. ಮಲ್ಲಿಕಾ ಗೌಡರ ನಿರೂಪಿಸಿದರು‌. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ