Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುರುಘಾ ಮಠ ಆಡಳಿತ ಟ್ರಸ್ಟ್ ಗೆ ಶಿವಯೋಗಿ ಕಳಸದ ಅಧ್ಯಕ್ಷ

ಚಿತ್ರದುರ್ಗ: ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ಮುರುಘಾ ಮಠದ ಟ್ರಸ್ಟ್‌ ಮತ್ತು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಸಮಿತಿ ರಚಿಸಿರುವ ರಾಜ್ಯ ಸರ್ಕಾರ, ನಿವೃತ್ತ ಐಎಎಸ್‌ ಅಧಿಕಾರಿ ಸಿ.ಶಿವಯೋಗಿ ಕಳಸದ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಶಿವಮೂರ್ತಿ ಶರಣರು ಮಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಹಾಗೂ ಆಡಳಿತದ ಭಾಗವಾಗಿರಬಾರದು ಎಂದು ಸೂಚಿಸಿದ್ದ ಸುಪ್ರೀಂ ಕೋರ್ಟ್‌, ಆಡಳಿತ ನೋಡಿಕೊಳ್ಳಲು ಮೂರು ದಿನಗಳಲ್ಲಿ ಸಮಿತಿ ರಚಿಸಬೇಕು ಎಂಬ ನಿರ್ದೇಶನವನ್ನು ಫೆ.27ರಂದು ರಾಜ್ಯ ಸರ್ಕಾರಕ್ಕೆ ನೀಡಿತ್ತು. ಆಡಳಿತ ಸಮಿತಿಗೆ ಕಳಸದ ಅಧ್ಯಕ್ಷರಾಗಿದ್ದು, ಸದಸ್ಯರನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಕಂದಾಯ ಇಲಾಖೆ ಆದೇಶದಲ್ಲಿ ಮಾಹಿತಿ ನೀಡಿದೆ.

ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ