Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

PUC ದ್ವಿತೀಯ : ಪರೀಕ್ಷಾ ಅವಧಿ 15 ನಿಮಿಷ ಕಡಿತ-ಇನ್ಮುಂದೆ 2:45 ಗಂಟೆ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಹೊಸ ನಿಯಮದಂತೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಇರಲಿದೆ. ಇದುವರೆಗಿನ ಪರೀಕ್ಷೆಗಳಲ್ಲಿ 3 ಗಂಟೆ ಅವಧಿ ಇರುತ್ತಿತ್ತು. ಪರೀಕ್ಷೆಗೆ ಉತ್ತರ ಬರೆಯುವ ಅವಧಿಯನ್ನು 2 ಗಂಟೆ 45 ನಿಮಿಷ ನಿಗದಿ ಮಾಡಿದ್ದರೂ, ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಓದಿಕೊಳ್ಳಲು ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತದೆ. ಈ ಹಿಂದೆ 3 ಗಂಟೆ ಇದ್ದಾಗಲೂ ಪ್ರಶ್ನೆಗಳ ಓದಿಗೆ ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತಿತ್ತು.

ಹಿಂದಿನ ಪರೀಕ್ಷೆಗಳಲ್ಲಿ ಪ್ರತಿ ವಿಷಯದ ಲಿಖಿತ ಪರೀಕ್ಷೆಯನ್ನು‌ 100 ಅಂಕಗಳಿಗೆ ನಡೆಸಲಾಗುತ್ತಿತ್ತು. 2023–24ನೇ ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹಾಗೂ ಆಂತರಿಕ ಮೌಲ್ಯಮಾಪನಕ್ಕೆ ಪ್ರತ್ಯೇಕ ಅಂಕಗಳನ್ನು ನಿಗದಿ ಮಾಡಿದ್ದ ಕಾರಣ ಲಿಖಿತ ಪರೀಕ್ಷೆಯ ಅಂಕಗಳನ್ನು ಕಡಿತ ಮಾಡಲಾಗಿತ್ತು. ಆದರೆ, ಪರೀಕ್ಷಾ ಅವಧಿಯನ್ನು ಕಡಿತ ಮಾಡಿರಲಿಲ್ಲ.

ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ವಿದ್ಯನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಗೃಹ ವಿಜ್ಞಾನ ಸೇರಿದಂತೆ ಪ್ರಾಯೋಗಿಕ ಪರೀಕ್ಷೆ ಇರುವ ಕೆಲ ವಿಷಯಗಳಲ್ಲಿ ಲಿಖಿತ ಪರೀಕ್ಷೆಯನ್ನು 70 ಅಂಕಗಳಿಗೆ ಹಾಗೂ ಪ್ರಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಲ್ಲಿ 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.

ವಿದ್ಯಾರ್ಥಿಗಳು 80 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು ಒಟ್ಟು 120 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಅವುಗಳಲ್ಲಿ 80 ಅಂಕಗಳಿಗಷ್ಟೇ ಉತ್ತರಿಸಬೇಕು. 70 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು 105 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಅವುಗಳಲ್ಲಿ 70 ಅಂಕಗಳಿಗಷ್ಟೇ ಉತ್ತರಿಸಬೇಕು.

ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸುವಾಗ ಪಠ್ಯ ಹೊರತಾದ ಪ್ರಶ್ನೆಗಳಿಗೆ ಅವಕಾಶ ನೀಡಬಾರದು. ಪಠ್ಯಕ್ರಮದಲ್ಲೇ ಇರುವ ವಿಯಷಗಳ ಮೇಲಷ್ಟೇ ಪ್ರಶ್ನೆಗಳನ್ನು ಸಿದ್ಧಪಡಿಸುವುದು ಕಡ್ಡಾಯ ಎಂದು ಮಂಡಳಿ ಹೇಳಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ