Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೇಂದ್ರ ಗ್ರಂಥಾಲಯಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯಕ್ಕೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸೆ. 19 ರಂದು ಶೈಕ್ಷಣಿಕ ಭೇಟಿ ನೀಡಿ, ಇಲ್ಲಿನ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡರು. ಉಪನಿರ್ದೇಶಕ ರಾಮಯ್ಯ ಅವರ ಮಾರ್ಗದರ್ಶನದಲ್ಲಿ, ಗ್ರಂಥಪಾಲಕರಾದ ಎಸ್ .ಎಸ್. ಸೀಮಿಮಠ ಮತ್ತು ಪ್ರಕಾಶ ಇಚಲಕರಂಜಿ ಅವರು ಗ್ರಂಥಾಲಯದ ವಿವಿಧ ವಿಭಾಗಗಳಾದ, ತಾಂತ್ರಿಕ ವಿಭಾಗದಲ್ಲಿನ ಕಾರ್ಯಗಳು,ಪರಿಚಲನಾ ವಿಭಾಗ, ಸ್ಪರ್ಧಾತ್ಮಕ ಪರೀಕ್ಷೆ ವಿಭಾಗ ಮತ್ತು ಅಂತರ್ಜಾಲ ವಿಭಾಗದಲ್ಲಿನ ಕೆಲಸ ಮತ್ತು ಸೇವೆಗಳ ಬಗ್ಗೆ ಮಾಹಿತಿ ನೀಡಿದರು.


ಗ್ರಂಥಾಲಯದಲ್ಲಿನ ನೊಂದಣಿ ಪ್ರಕ್ರಿಯೆ,ಮಕ್ಕಳ ಗ್ರಂಥಾಲಯದಲ್ಲಿನ ಪುಸ್ತಕಗಳು ಮತ್ತು ಸೌಲಭ್ಯಗಳ ಬಗ್ಗೆ ಮತ್ತು ಆಡಳಿತಾತ್ಮಕ ವಿಷಯಗಳು,ಗ್ರಂಥಾಲಯ ತಂತ್ರಾಂಶದ ಬಗ್ಗೆ ವಿಧ್ಯಾರ್ಥಿಗಳು ತಿಳಿದುಕೊಂಡರು. ಜೊತೆಗೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಕಚೇರಿಗೂ ಭೇಟಿ ನೀಡಿ ಅಲ್ಲಿನ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡರು. ಇದಕ್ಕೂ ಮೊದಲು ಎಲ್ಲಾ ವಿದ್ಯಾರ್ಥಿಗಳು ಶಹಾಪುರ ಡಿಜಿಟಲ್ ಗ್ರಂಥಾಲಯಕ್ಕೂ ಭೇಟಿ ನೀಡಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಕಿರಣ ಸವಣೂರ, ಸಹಾಯಕ ಪ್ರಾಧ್ಯಾಪಕ ಡಾ.ರಮೇಶ ಕುರಿ ಮತ್ತು ನಗರ ಕೇಂದ್ರ ಗ್ರಂಥಾಲಯದ ಸಿಬ್ಬಂದಿಗಳಾದ ಸುಮಿತ್ ಕಾವಳೆ, ಆನಂದ ಮುತ್ತಗಿ, ಸುನಿಲ್ ಡಿ, ಏಕನಾಥ ಅಂಬೇಕರ, ಸಂಗೀತಾ ನಾವಿ, ರಾಜು ಕಟ್ಟಿಮನಿ, ಸರಸ್ವತಿ ಪಿ, ಪೂರ್ಣಿಮಾ ಕೆ, ಲಕ್ಷ್ಮಿ ಪೀ, ವಿಜಯಲಕ್ಷ್ಮೀ ಪಾಟೀಲ್, ರಾಜಶ್ರೀ ಮತ್ತಿತರು ಹಾಜರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ