Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಆರ್. ಅಶ್ವಿನ್ ನಿವೃತ್ತಿ ಘೋಷಣೆ

ಬ್ರಿಸ್ಟೇನ್‌: ಭಾರತೀಯ ಕ್ರಿಕೆಟ್ ತಂಡದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಸಾಗುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮಧ್ಯೆ ದಿಢೀರ್ ನಿವೃತ್ತಿ ನಿರ್ಧಾರ ಪ್ರಕಟಿಸಿರುವ ಅಶ್ವಿನ್, ಕ್ರೀಡಾಪ್ರೇಮಿಗಳನ್ನು ಆಶ್ಚರ್ಯಚಕಿತಗೊಳಿಸಿದ್ದಾರೆ.

ಬ್ರಿಸ್ಟೇನ್‌ನ ಗಾಬಾದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾಗೊಂಡಿರುವ ಬೆನ್ನಲ್ಲೇ ಅಶ್ವಿನ್ ನಿವೃತ್ತಿ ನಿರ್ಧಾರವನ್ನು ಬಿಸಿಸಿಐ ಪ್ರಕಟಿಸಿದೆ.

ಕುಂಬ್ಳೆ ಸಾಲಿನಲ್ಲಿ ಅಶ್ವಿನ್...

ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ದಿಗ್ಗಜ ಅನಿಲ್ ಕುಂಬ್ಳೆ (619) ಬಳಿಕ ಅತಿ ಹೆಚ್ಚು ವಿಕೆಟ್ ಗಳಿಸಿದ ದಾಖಲೆ ಅಶ್ವಿನ್ ಹೆಸರಲ್ಲಿದೆ. ಅಶ್ವಿನ್ 106 ಟೆಸ್ಟ್ ಪಂದ್ಯಗಳಲ್ಲಿ 537 ವಿಕೆಟ್ ಗಳಿಸಿದ್ದಾರೆ.

38 ವರ್ಷದ ಅಶ್ವಿನ್, ಅಡಿಲೇಡ್‌ನಲ್ಲಿ ನಡೆದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಕೊನೆಯದಾಗಿ ಭಾರತದ ಪರ ಆಡಿದ್ದರು. ಒಂದು ವಿಕೆಟ್ ಗಳಿಸಿದ್ದರು.

ನಾನು ನಿಮ್ಮ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಭಾರತೀಯ ಕ್ರಿಕೆಟಿಗನಾಗಿ ಇಂದು ನನ್ನ ಕೊನೆಯ ದಿನ' ಎಂದು ಅಶ್ವಿನ್ ಹೇಳಿದ್ದಾರೆ.

ಗಾಬಾದ ಸ್ಟೇಡಿಯಂನಲ್ಲಿ ಭಾವೋದ್ವೇಗಕ್ಕೊಳಗಾಗಿ ವಿರಾಟ್ ಕೊಹ್ಲಿ ಅವರನ್ನು ಅಶ್ವಿನ್ ತಬ್ಬಿಕೊಳ್ಳುತ್ತಿರುವ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಮತ್ತೊಂದೆಡೆ ಅಶ್ವಿನ್ ನಿರ್ಧಾರವನ್ನು ಗೌರವಿಸುವುದಾಗಿ ನಾಯಕ ರೋಹಿತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ