Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಂದಿನ ವಾರ ಬೆಳಗಾವಿಯಲ್ಲಿ ಮಳೆ ?

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಾರ್ಚ್​ 12 ರಿಂದ ಮೂರು ದಿನಗಳ ಕಾಲ ಕರ್ನಾಟಕದ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬೀದರಿನಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇದೆ.
ಹೊನ್ನಾವರ, ಕಾರವಾರ, ಹಾಸನ ಮತ್ತು ಮೈಸೂರು ಸೇರಿದಂತೆ ಹಲವಾರು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಕಂಡುಬಂದರೆ, ಬೀದರ್ ಮತ್ತು ಕೊಪ್ಪಳದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಸ್ವಲ್ಪ ಕಡಿಮೆಯಾಗಿದೆ.
ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಉಷ್ಭ ತಾಪಮಾನ ಮುಂದುವರಿಯಲಿದೆ. ರಾತ್ರಿ ವೇಳೆ ಸಾಮಾನ್ಯಕ್ಕಿಂತ ಹೆಚ್ಚು ಬೆಚ್ಚಗಿರುತ್ತದೆ. ರಾತ್ರಿಯ ತಾಪಮಾನವು ಒಂದು ಅಥವಾ ಎರಡು ಡಿಗ್ರಿಗಳಷ್ಟು ಹೆಚ್ಚಿರಬಹುದು. ಎಂದು ಹೇಳಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು