Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನ

ಮುಂಬೈ: 33 ವರ್ಷದ ನಟಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಖ್ಯಾತ ಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಶಕೀಲ್ ನೂರಾನಿ (73) ಅವರನ್ನು ಮುಂಬೈನ ಮಾಲ್ವಾಣಿ ಪೊಲೀಸರು ಆಗಸ್ಟ್ 8ರ ಮುಂಜಾನೆ ಬಂಧಿಸಿದ್ದಾರೆ.
‘ಬಡೆ ದಿಲ್ ವಾಲಾ’ (1999) ಹಾಗೂ ‘ಜೋರು ಕಾ ಗುಲಾಮ್’ (2000) ಸೇರಿದಂತೆ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ನೂರಾನಿ ಅವರನ್ನು ಬಂಧಿಸಿದ ಬಳಿಕ ಬೋರಿವಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು ಆಗಸ್ಟ್ 12ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪೊಲೀಸ್ ದೂರಿನ ಪ್ರಕಾರ, ಚಿತ್ರವೊಂದರ ಕುರಿತು ಚರ್ಚಿಸುವ ನೆಪದಲ್ಲಿ ನೂರಾನಿ ಅವರು ನಟಿಯನ್ನು ತಮ್ಮ ಮಾಲ್ವಾಣಿ ನಿವಾಸಕ್ಕೆ ಕರೆಯಿಸಿಕೊಂಡಿದ್ದರು. ಅಲ್ಲಿ ಆಕೆಗೆ ಪಾನೀಯದಲ್ಲಿ ಯಾವುದೋ ವಸ್ತು ಬೆರೆಸಿ ನೀಡಿದ ಬಳಿಕ ಆಕೆ ಪ್ರಜ್ಞಾಹೀನಳಾದಳು ಎಂದು ಆರೋಪಿಸಲಾಗಿದೆ. ಬಳಿಕ ನೂರಾನಿ ಅವರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಘಟನೆಯನ್ನು ಚಿತ್ರೀಕರಿಸಿಕೊಂಡಿದ್ದ ನೂರಾನಿ, ಆ ವಿಡಿಯೋವನ್ನು ಪ್ರಸಾರ ಮಾಡುವುದಾಗಿ ಬೆದರಿಸಿ, ಪೊಲೀಸರನ್ನು ಸಂಪರ್ಕಿಸದಂತೆ ಹಾಗೂ ಕುಟುಂಬದವರಿಗೆ ವಿಷಯ ತಿಳಿಸದಂತೆ ಬೆದರಿಕೆ ಹಾಕಿದ್ದರು ಎಂದು ನಟಿ ಆರೋಪಿಸಿದ್ದಾರೆ. ವಿಡಿಯೋವನ್ನು ಬಳಸಿಕೊಂಡು ತಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿತ್ತು ಎಂದೂ ಅವರು ದೂರಿನಲ್ಲಿ ಹೇಳಿದ್ದಾರೆ.
ಸ್ಕ್ರಿಪ್ಟ್ ಓದುವ ನೆಪದಲ್ಲಿ ನೂರಾನಿಯವರ ನಿವಾಸಕ್ಕೆ ತೆರಳಿದಾಗ, ಅವರು ನೀಡಿದ ಪಾನೀಯ ಸೇವಿಸಿದ ಬಳಿಕ ತಾನು ಪ್ರಜ್ಞಾಹೀನಳಾದೆ ಎಂದು ನಟಿ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ಆ ಸಂದರ್ಭದಲ್ಲಿ ನೂರಾನಿ ಅವರು ತನ್ನ ವಿಡಿಯೋ ಮಾಡಿಕೊಂಡಿದ್ದು, ಅದನ್ನು ಹರಿಬಿಡುವುದಾಗಿ ಬೆದರಿಸಿದ್ದರು ಎಂದು ಅವರು ಆರೋಪಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್‌ಗಳು 64(2)(M), 123, 351(2) ಮತ್ತು 88 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ನೂರಾನಿ ಅವರ ಪರ ವಕೀಲ ವಿಕಾಸ್ ಸಿಂಗ್ ಗೋಯರ್ ಅವರು ತಮ್ಮ ಕಕ್ಷಿದಾರರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ವಾದಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ