Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಏಷ್ಯಾದ ದೊಡ್ಡ ಸಾಹಿತ್ಯೋತ್ಸವಕ್ಕೆ ರವಿ ಕೋಟಾರಗಸ್ತಿ ಆಯ್ಕೆ

ಬೆಳಗಾವಿ: ಕೇಂದ್ರ ಸಾಂಸ್ಕೃತಿಕ ಮಂತ್ರಾಲಯದ ಸಹಯೋಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಮಾರ್ಚ್ 7ರಿಂದ 12ರವರೆಗೆ ನವದೆಹಲಿಯಲ್ಲಿ ಆಯೋಜಿಸಿರುವ ಸಾಹಿತ್ಯ ರಂಗದಲ್ಲೇ ಪ್ರತಿಷ್ಠಿತ ಕಾರ್ಯಕ್ರಮವಾದ

'ಏಷ್ಯಾದ ಅತಿದೊಡ್ಡ ಸಾಹಿತ್ಯೋತ್ಸವ'ಕ್ಕೆ ಬೆಳಗಾವಿಯ ಹಿರಿಯ ಸಾಹಿತಿ, ಕವಿ ಮತ್ತು ನಿವೃತ್ತ ಅಧಿಕಾರಿ ರವಿ ಕೋಟಾರಗಸ್ತಿ (ಎಸ್.ಸಿ.ಕೋಟಾರಗಸ್ತಿ) ಆಯ್ಕೆಯಾಗಿದ್ದಾರೆ.

ಮಾರ್ಚ್ 8ರಂದು ಬೆಳಿಗ್ಗೆ 10ಕ್ಕೆ ನಡೆಯುವ 'ಎಸೆಂಬಲ್ ಆಫ್ ಇಮೇಜ್, ರಿದಮ್ ಆ್ಯಂಡ್ ಬ್ಯೂಟಿ: ಮಲ್ಟಿಲಿಂಗ್ವಲ್ ಪೋಯಿಟ್ರಿ ರೀಡಿಂಗ್ಸ್' ವಿಷಯ ಕುರಿತ ಕವಿಗೋಷ್ಠಿಯಲ್ಲಿ ಕನ್ನಡ ವಿಷಯದಲ್ಲಿ ಅವರು ಕಾವ್ಯ ವಾಚಿಸಲಿದ್ದಾರೆ.

ಅವರೊಂದಿಗೆ ಡೊಗ್ರಿ, ಗುಜರಾತಿ, ಹಿಂದಿ, ಕಾಶ್ಮೀರಿ, ಓಡಿಯಾ, ಸಾಂಸ್ಕೃತಿಕ ಮತ್ತು ತಮಿಳು ಭಾಷೆಗಳಲ್ಲೂ ಕವಿಗಳು ಕಾವ್ಯ ವಾಚಿಸಲು ವೇದಿಕೆ ಹಂಚಿಕೊಳ್ಳಲಿದ್ದಾರೆ.

'ಸರ್ಕಾರಿ ನೌಕರಿ ಜತೆಜತೆಯಲ್ಲೇ ಸಾಹಿತ್ಯಿಕ ಚಟುವಟಿಕೆಯಲ್ಲೂ ಪಾಲ್ಗೊಳ್ಳುತ್ತ ಬಂದವನು ನಾನು. ಇಂಥದ್ದೊಂದು ಸಾಹಿತ್ಯೋತ್ಸವದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದ್ದಕ್ಕೆ‌ ಖುಷಿಯಾಗಿದೆ' ಎಂದು ರವಿ ಕೋಟಾರಗಸ್ತಿ ಸಂತಸ ಹಂಚಿಕೊಂಡಿದ್ದಾರೆ.

'ಈ ಉತ್ಸವದಲ್ಲಿ ದೇಶದ ನಾನಾ ಸಾಂಸ್ಕೃತಿಕ ವಲಯಗಳ ಅನಾವರಣವಾಗುತ್ತದೆ.‌ ದಿಗ್ಗಜ ಸಾಹಿತಿಗಳ ಸಮಾಗಮವಾಗುತ್ತದೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿರುವ ಕರ್ನಾಟಕದ ಡಾ.ಬಸವರಾಜ ಕಲಗುಡಿ, ಡಾ.ಮನು ಬಳಿಗಾರ, ಡಾ.ಬಸವರಾಜ ಸಾದರ, ಮರಾಠಿಯ ಪ್ರಖ್ಯಾತ ಲೇಖಕರಾದ ನಿವೃತ್ತ ಐಎಎಸ್ ಅಧಿಕಾರಿಗಳಾದ ಮಹಾರಾಷ್ಟ್ರದ ಡಾ.ವಿಶ್ವಾಸ ಪಾಟೀಲ ಹಾಗೂ ಅಕಾಡೆಮಿಯ ಮಾಜಿ ಸದಸ್ಯರಾದ ಬೆಳಗಾವಿಯ ಹಿರಿಯ ಸಾಹಿತಿ ಸರಜೂ ಕಾಟ್ಕರ್ ಅವರ ಸಹಕಾರ ಸ್ಮರಿಸುತ್ತೇ‌‌ನೆ. ಸಾಹಿತ್ಯದಲ್ಲಿ ಅತ್ಯುನ್ನತ ಕಾರ್ಯಕ್ರಮವಾದ ಇದರಲ್ಲಿನ
ದಿಗ್ಗಜರೊಂದಿಗೆ ವೇದಿಕೆ ಹಂಚಿಕೊಳ್ಳುವುದು ನನ್ನ ಸೌಭಾಗ್ಯ.
ಸಾಹಿತ್ಯಿಕ ಸಾಧನೆಗೆ ನೆರವಾದ ಬೆಳಗಾವಿಯ ಎಲ್ಲ ಸಾಹಿತಿಗಳು, ಇತರೆ ರಂಗಗಳ ಹಿರಿಯರಿಗೆ ಅಭಾರಿಯಾಗಿದ್ದೇನೆ' ಎಂದು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ