Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆರ್ ಎಸ್ ಎಸ್ ಚಟುವಟಿಕೆ ನಿಷೇಧ : ಯತ್ನಾಳ ಸಿಡಿಮಿಡಿ

ಮಂಡ್ಯ: ಪ್ರಿಯಾಂಕ್ ಖರ್ಗೆ ಒಬ್ಬ ಬಚ್ಚ ನೆಹರು ಸೇರಿದಂತೆ ಯಾರಿಂದಲೂ ಆರ್‌ಎಸ್‌ಎಸ್‌ ನಿಷೇಧ ಮಾಡಲಾಗಿಲ್ಲ. ಇವನು ಮಾಡ್ತಾನಾ ಎಂದು ಏಕವಚನದಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಪ್ರಶ್ನಿಸಿದರು.

ಆರ್‌ಎಸ್‌ಎಸ್‌ ಬ್ಯಾನ್ ಮಾಡಲು ಸಾಧ್ಯವಿಲ್ಲ. ಮುಸ್ಲಿಂ ಒಲೈಕೆಗಾಗಿ ಈ ರೀತಿ ಹೇಳ್ತಾರೆ. ಆರ್‌ಎಸ್‌ಎಸ್ ಕಬ್ಬ ಮಾಡಿಲ್ಲ. ಭರತ ಭೂಮಿಗೆ ನಮಸ್ಕಾರ ಮಾಡಿ ಹೋಗುತ್ತಾರೆ. ಹಿಂದುಗಳ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಿದ್ದಾರೆ. ಮಸೀದಿ ವಶ ಮಾಡಿಕೊಂಡಿದ್ದಾರಾ ಎಂದು ಏರುದನಿಯಲ್ಲಿ ಪ್ರಶ್ನಿಸಿದರು.

ಮುಂಬರುವ 2028 ರ ಚುನಾವಣೆಯಲ್ಲಿ ರಾಜ್ಯದಲ್ಲಿ ಹಿಂದು ಸರ್ಕಾರ ಜಾರಿಯಾಗಬೇಕೆಂಬ ಕೂಗು ಎಲ್ಲೆಡೆಯಿಂದ ಕೇಳಿಬರುತ್ತಿದೆ ಎಂದು ವಿಜಯನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಮುಸ್ಲಿಮರ ತುಷ್ಠಿಕರಣ ಹೆಚ್ಚಾಗಿದೆ. ಕೆಲವರು ನಾನು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದರೆ, ಮತ್ತೆ ಕೆಲವರು ಮುಸ್ಲಿಂ ಕಾರ್ಯಕ್ರಮದಲ್ಲಿ ಅವರ ಟೋಪಿ ಧರಿಸುತ್ತಾರೆ. ಇದು ರಾಜ್ಯ ಸರ್ಕಾರದಿಂದ ಹಿಂದುಗಳ ರಕ್ಷಣೆಯಾಗುತ್ತಿಲ್ಲವೆಂಬ ಸಂದೇಶ ರವಾನಿಸಿದೆ. ಕಾಂಗ್ರೆಸ್ ಕರ್ನಾಟಕವನ್ನು ಮುಸ್ಲಿಂ ಮಾಡಲು ಹೊರಟಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಇದುವರೆಗೂ ಕಾಂಗ್ರೆಸ್‌ ಸರ್ಕಾರ ಹಿಂದುಗಳ ಮೇಲಿನ ಒಂದೇ ಒಂದು ಪ್ರಕರಣವನ್ನು ವಾಪಸ್ ಪಡೆದಿಲ್ಲ. ಆದರೆ, ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣದ ಆರೋಪಿಗಳ ಪ್ರಕರಣವನ್ನು ವಾಪಸ್ ಪಡೆಯುತ್ತದೆ. ಕರ್ನಾಟಕದಲ್ಲಿ ಮುಸ್ಲಿಮರ ಬೆಂಬಲದ ಸರ್ಕಾರ ಅಧಿಕಾರ ನಡೆಸುತ್ತಿದೆ. ಈ ಕಾರಣಕ್ಕೆ ಹಿಂದುಗಳು ಜಾಗೃತರಾಗುತ್ತಿದ್ದಾರೆ ಎಂದು ಹೇಳಿದರು.

ಯುವಕರಿಗೆ ಡಿಜೆ ಹಾಕೋದು ಸಹಜ. ಸರ್ಕಾರ ನಿಷೇಧ ಮಾಡಿದೆ ಎಂದರೆ ವಿಚಿತ್ರ. ಒಂದು ಜಿಲ್ಲೆಗೆ ಅನುಮತಿ, ಮತ್ತೊಂದು ಜಿಲ್ಲೆಗೆ ತಾರತಮ್ಯ. ಮಸೀದಿಯ ಸೌಂಡ್‌ನಿಂದ ಶಾಲಾ ಮಕ್ಕಳಿಗೆ ತೊಂದರೆ ಆಗುತ್ತಿದೆ. ಇದು ಸುಪ್ರೀಂಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದ್ದರೂ ಯಾವುದೇ ಕ್ರಮವಿಲ್ಲ ಎಂದು ದೂಷಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ