Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಚಲನ ಮೂಡಿಸಿತು ಈ ಭೇಟಿ : ಸತೀಶ-ವಿಜಯೇಂದ್ರ ಮಹತ್ವದ ಮಾತುಕತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದೆ. ಸಚಿವ ಸತೀಶ ಜಾರಕಿಹೊಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀ‌ರ್ ಭೇಟಿಯಾಗಿದ್ದಾರೆ.

ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ವಿಜಯೇಂದ್ರ-ಜಾರಕಿಹೊಳಿ ಭೇಟಿ ಆಗಿದ್ದಾರೆ.
ಇಬ್ಬರು ನಾಯಕರ ಭೇಟಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ, ಸಿಎಂ ಬದಲಾವಣೆಯ ಕೂಗು ಕೇಳಿಬಂದಿತ್ತು. ಅಲ್ಲಿವರೆಗೆ ಸೈಲೆಂಟ್ ಆಗಿದ್ದ ಸತೀಶ ಜಾರಕಿಹೊಳಿ ದಿಢೀ‌ರ್ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗೆ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಇತ್ತ ಪರಮೇಶ್ವ‌ರ್ ಮತ್ತು ಸತೀಶ್ ಜಾರಕಿಹೊಳಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.

ಬಳಿಕ ಮತ್ತೆ ಡಿಕೆ ಬ್ರದರ್ಸ್, ದೆಹಲಿಗೆ ತೆರುವ ಪ್ಲಾನ್‌ನಲ್ಲಿ ಇದ್ದಾರೆ ಎನ್ನಲಾಗಿದೆ. ಇದೀಗ ಸತೀಶ್ ಜಾರಕಿಹೊಳಿಯನ್ನು ಬಿವೈ ವಿಜಯೇಂದ್ರ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಇನ್ನು ತಮ್ಮ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರು, ಶಿವಮೊಗ್ಗ-ಶಿಕಾರಿಪುರ ಮಾರ್ಗದಲ್ಲಿರುವ ಕುಟ್ರಳ್ಳಿ ಬಳಿ ಟೋಲ್ ಗೇಟ್ ತೆರವು ಮಾಡುವಂತೆ ಮನವಿ ಮಾಡಿದ್ದೇನೆ. ಈ ಟೋಲ್ ಬೇರೆಡೆ ಶಿಫ್ಟ್ ಮಾಡಲು ಮನವಿ ಮಾಡಿದ್ದೇವೆ. ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್ ಬರುತ್ತವೆ. ಇದರಿಂದ ರೈತರಿಗೆ ಅನಾನುಕೂಲವಾಗಿದೆ. ಮಕ್ಕಳು ಶಾಲೆಗೆ ಹೋಗುವುದು ತೊಂದರೆ ಆಗಿದೆ. ಟೋಲ್ ಶಿಫ್ಟ್‌ಗೆ ಹೋರಾಟಗಳು ನಡೆದಿವೆ. ಸಚಿವರು ಸಕಾರಾತ್ಮಕವಾಗಿ ಭರವಸೆ ಕೊಟ್ಟಿದ್ದಾರೆ. ಶೀಘ್ರದಲ್ಲೇ ಸಭೆ ಕರೆಯುವುದಾಗಿ ಹೇಳಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?